ADVERTISEMENT

ಉದ್ಯೋಗಕ್ಕಾಗಿ ಭೂಮಿ ಹಗರಣ: ಲಾಲು ಪ್ರಸಾದ್‌ ವಿರುದ್ಧ ಪೂರಕ ಆರೋಪಪಟ್ಟಿ ಸಲ್ಲಿಕೆ

ಪಿಟಿಐ
Published 6 ಆಗಸ್ಟ್ 2024, 13:32 IST
Last Updated 6 ಆಗಸ್ಟ್ 2024, 13:32 IST
<div class="paragraphs"><p>ಲಾಲು ಪ್ರಸಾದ್‌</p></div>

ಲಾಲು ಪ್ರಸಾದ್‌

   

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇ.ಡಿ) ಕೇಂದ್ರದ ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್‌, ಅವರ ಮಗ ತೇಜಸ್ವಿ ಯಾದವ್‌ ಮತ್ತು ಇತರ ಎಂಟು ಮಂದಿ ಆರೋಪಿಗಳ ವಿರುದ್ಧ ಪೂರಕ ಆರೋಪಪಟ್ಟಿಯನ್ನು ಮಂಗಳವಾರ ಸಲ್ಲಿಸಿದೆ. 

ವಿಶೇಷ ನ್ಯಾಯಮೂರ್ತಿ ವಿಶಾಲ್‌ ಗೋಗ್ನೆ ಅವರೆದುರು ಆರೋಪಪಟ್ಟಿ ಇರಿಸಲಾಯಿತು. ಪ್ರಕರಣದ ಮುಂದಿನ ವಿಚಾರಣೆಯನ್ನು ಅವರು ಆಗಸ್ಟ್‌ 13ಕ್ಕೆ ನಿಗದಿಪಡಿಸಿದರು.

ADVERTISEMENT

2004ರಿಂದ 2009ರ ಅವಧಿಯಲ್ಲಿ ಲಾಲು ಪ್ರಸಾದ್‌ ಯಾದವ್‌ ಅವರು ಕೇಂದ್ರ ರೈಲ್ವೆ ಸಚಿವರಾಗಿದ್ದರು. ಈ ವೇಳೆ ಲಾಲು ಕುಟುಂಬಕ್ಕೆ ಜಾಮೀನು ಮಾರಾಟ ಮಾಡಿದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ನೀಡಲಾಗಿದೆ ಎಂದು ಆರೋಪಿಸಲಾಗಿತ್ತು. ಈ ಹಗರಣಕ್ಕೆ ಸಂಬಂಧಿಸಿ ಲಾಲು ಪ್ರಸಾದ್‌, ರಾಬ್ರಿ ದೇವಿ ಮತ್ತು ಇತರರ ವಿರುದ್ಧ 2022ರ ಮೇ 18ರಂದು ಸಿಬಿಐ ಪ್ರಕರಣ ದಾಖಲಿಸಿತ್ತು. ಬಳಿಕ ಇ.ಡಿ ಎಫ್‌ಐಆರ್‌ ದಾಖಲಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.