ನವದೆಹಲಿ: ಉದ್ಯಮಿ ವಿಜಯ ಮಲ್ಯ ಅವರನ್ನು ಸದ್ಯ ಭಾರತಕ್ಕೆ ಕರೆತರುವ ಸಾಧ್ಯತೆಗಳಿಲ್ಲ.
ಮಲ್ಯ ಅವರನ್ನು ಭಾರತಕ್ಕೆ ಹಸ್ತಾಂತರಿಸುವ ಮುನ್ನ ಕಾನೂನು ತೊಡಕುಗಳನ್ನು ಬಗೆಹರಿಸಬೇಕಾಗಿದೆ ಎಂದು ಬ್ರಿಟನ್ ಸರ್ಕಾರ ಗುರುವಾರ ತಿಳಿಸಿದೆ.
’ಈ ವಿಷಯ ರಹಸ್ಯವಾಗಿದೆ. ಎಷ್ಟು ದಿನಗಳಲ್ಲಿ ಇದು ಇತ್ಯರ್ಥವಾಗಲಿದೆ ಎಂದು ಅಂದಾಜಿಸಲು ನಮಗೆ ಸಾಧ್ಯವಾಗುವುದಿಲ್ಲ. ಬ್ರಿಟನ್ ಕಾನೂನಿನ ಅನ್ವಯ, ಕಾನೂನು ತೊಡಕುಗಳು ಇತ್ಯರ್ಥವಾಗುವವರೆಗೂ ಹಸ್ತಾಂತರ ಪ್ರಕ್ರಿಯೆ ನಡೆಯುವುದಿಲ್ಲ’ ಎಂದು ಬ್ರಿಟನ್ ಹೈಕಮಿಷನ್ ಕಚೇರಿ ವಕ್ತಾರರು ತಿಳಿಸಿದ್ದಾರೆ.
ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತಕ್ಕೆ ಹಸ್ತಾಂತರಿಸುವ ಕುರಿತು ಬ್ರಿಟನ್ ಸುಪ್ರಿಂ ಕೋರ್ಟ್‌ನಲ್ಲಿ ವಿಜಯ ಮಲ್ಯ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಲಾಗಿತ್ತು.
‘ಮಲ್ಯ ಅವರನ್ನು ಭಾರತಕ್ಕೆ ಕರೆತರಲು ಬ್ರಿಟನ್ ಸರ್ಕಾರದ ಜತೆ ಸಂಪರ್ಕದಲ್ಲಿದ್ದೇವೆ‘ ಎಂದು ವಿದೇಶಾಂಗ ಸಚಿವಾಲಯದ ವಕ್ತಾರರರು ಮೇ 21ರಂದು ಹೇಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.