ನವದೆಹಲಿ: 'ವಿಶ್ವ ಜಲ ದಿನ'ದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ನೀರಿನ ಪ್ರತಿಯೊಂದು ಹನಿಯನ್ನು ಉಳಿಸಬೇಕೆಂಬ ತಮ್ಮ ಕರೆಯನ್ನು ಪುನರುಚ್ಚರಿಸಿದ್ದಾರೆ.
ಮಂಗಳವಾರ ಮಾತನಾಡಿದ ಅವರು, 'ಕಳೆದ ಕೆಲವು ವರ್ಷಗಳಿಂದ ನೀರಿನ ಸಂರಕ್ಷಣೆಯು ಸಾಮೂಹಿಕ ಆಂದೋಲನವಾಗುತ್ತಿದೆ.
ವಿಶ್ವ ಜಲ ದಿನವಾದ ಇಂದು ನಾವೆಲ್ಲರೂ ನೀರಿನ ಪ್ರತಿಯೊಂದು ಹನಿಯನ್ನು ರಕ್ಷಿಸುವ ಶಪಥ ಮಾಡೋಣ. ದೇಶದ ಪ್ರತಿಯೊಬ್ಬ ನಾಗರಿಕರಿಗೆ ಶುದ್ಧ ನೀರಿನ ಪೂರೈಕೆ ಹಾಗೂ ನೀರಿನ ಸಂರಕ್ಷಣೆ ಸಲುವಾಗಿ 'ಜಲ ಜೀವನ ಮಿಷನ್' ಸೇರಿದಂತೆ ಹಲವು ಯೋಜನೆಗಳನ್ನು ಭಾರತ ಸರ್ಕಾರ ಕೈಗೊಂಡಿದೆ' ಎಂದು ಹೇಳಿದ್ದಾರೆ.
ಅಲ್ಲದೆ ನೀರಿನ ಸಂರಕ್ಷಣೆಯಲ್ಲಿ ತೊಡಗಿದ ದೇಶದ ನಾಗರಿಕರು ಹಾಗೂ ಸಂಘ-ಸಂಸ್ಥೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.