ನವದೆಹಲಿ: ಇತ್ತೀಚೆಗೆ ದುಬೈನಿಂದ ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನದಲ್ಲಿ ಜೀವಂತ ಗುಂಡು ಪತ್ತೆಯಾಗಿದ್ದು, ಭದ್ರತಾ ಉಲ್ಲಂಘನೆ ಕುರಿತು ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಕ್ಟೋಬರ್ 27ರಂದು ವಿಮಾನ ಶುಚಿಗೊಳಿಸುವ ಸಂದರ್ಭದಲ್ಲಿ ಏರ್ ಇಂಡಿಯಾ ಸಿಬ್ಬಂದಿಗೆ ಜೀವಂತ ಗುಂಡು ಕಂಡುಬಂದಿದೆ. ಘಟನೆ ಸಂಬಂಧ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
‘ಅಕ್ಟೋಬರ್ 27ರಂದು ದುಬೈನಿಂದ ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನದ (AI916) ಸೀಟ್‌ನ ಜೇಬಿನಲ್ಲಿ ಒಂದು ಜೀವಂತ ಗುಂಡು ಪತ್ತೆಯಾಗಿದೆ. ವಿಮಾದಲ್ಲಿದ್ದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಭದ್ರತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ತಕ್ಷಣವೇ ಏರ್‌ಪೋರ್ಟ್ ಪೊಲೀಸರಿಗೆ ದೂರು ನೀಡಲಾಯಿತು’ ಎಂದು ಏರ್ ಇಂಡಿಯಾ ವಕ್ತಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.