ADVERTISEMENT

ನಿರೀಕ್ಷಣಾ ಜಾಮೀನು ಕೋರಿ ದೆಹಲಿ ನ್ಯಾಯಾಲಯದ ಮೊರೆ ಹೋದ ಎಲ್‌ಜೆಪಿ ಸಂಸದ

ಪಿಟಿಐ
Published 14 ಸೆಪ್ಟೆಂಬರ್ 2021, 13:54 IST
Last Updated 14 ಸೆಪ್ಟೆಂಬರ್ 2021, 13:54 IST
ಲೋಕ ಜನಶಕ್ತಿ ಪಕ್ಷದ ಸಂಸದ ಪ್ರಿನ್ಸ್ ರಾಜ್ (ಚಿತ್ರ; ಫೇಸ್‌ಬುಕ್))
ಲೋಕ ಜನಶಕ್ತಿ ಪಕ್ಷದ ಸಂಸದ ಪ್ರಿನ್ಸ್ ರಾಜ್ (ಚಿತ್ರ; ಫೇಸ್‌ಬುಕ್))   

ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ಬಂಧನದಿಂದ ರಕ್ಷಣೆ ನೀಡುವಂತೆ ಕೋರಿ ಲೋಕ ಜನಶಕ್ತಿ ಪಕ್ಷದ ಸಂಸದ ಪ್ರಿನ್ಸ್ ರಾಜ್ ಮಂಗಳವಾರ ದೆಹಲಿ ನ್ಯಾಯಾಲಯದ ಮೊರೆ ಹೋಗಿದ್ದಾರೆ.

ವಿಶೇಷ ನ್ಯಾಯಾಧೀಶ ಎಂ.ಕೆ.ನಾಗಪಾಲ್ ಅವರ ಮುಂದೆ ನಿರೀಕ್ಷಣಾ ಜಾಮೀನು ಅರ್ಜಿ ಗುರುವಾರ ವಿಚಾರಣೆಗೆ ಬರುವ ಸಾಧ್ಯತೆಯಿದೆ.

ನ್ಯಾಯಾಲಯದ ನಿರ್ದೇಶನದ ಮೇರೆಗೆ ಪ್ರಕರಣ ದಾಖಲಾದ ನಂತರ ದಿವಂಗತ ರಾಮ್ ವಿಲಾಸ್ ಪಾಸ್ವಾನ್ ಅವರ ಸೋದರಳಿಯ ರಾಜ್ ಪರವಾಗಿ ವಕೀಲ ನಿತೇಶ್ ರಾಣಾ ಅರ್ಜಿ ಸಲ್ಲಿಸಿದರು.

ADVERTISEMENT

ಆಪಾದಿತ ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತ ಹಣ ವಸೂಲಿ ಮಾಡುತ್ತಿದ್ದು, ರಾಜ್ ಅವರನ್ನು ಬ್ಲ್ಯಾಕ್ ಮೇಲ್ ಮಾಡಲಾಗುತ್ತಿದೆ. ಈ ಸಂಬಂಧ ಈಗಾಗಲೇ ಪ್ರಕರಣ ದಾಖಲಾಗಿದ್ದು, ಮಹಿಳೆ ಮತ್ತು ಆಕೆಯ ಸಹಚರರಿಗೆ ನಿರೀಕ್ಷಣಾ ಜಾಮೀನು ನೀಡಲಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ..

ರಾಜ್ ಅವರು ಬಿಹಾರದ ಸಮಸ್ತಿಪುರದ ಸಂಸತ್ ಸದಸ್ಯರಾಗಿದ್ದಾರೆ.

ಈ ವರ್ಷದ ಮೇ ತಿಂಗಳಿನಲ್ಲಿ ಮಹಿಳೆ ಇಲ್ಲಿಯ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ನಂತರ ದೆಹಲಿ ನ್ಯಾಯಾಲಯದ ಆದೇಶದ ಮೇರೆಗೆ ದೆಹಲಿ ಪೊಲೀಸರು ಪ್ರಿನ್ಸ್ ರಾಜ್ ವಿರುದ್ಧ ಸೆಪ್ಟೆಂಬರ್ 9 ರಂದು ಎಫ್ಐಆರ್ ದಾಖಲಿಸಿದ್ದರು.

ತಾನು ಎಲ್‌ಜೆಪಿ ಕಾರ್ಯಕರ್ತೆ ಎಂದು ಹೇಳಿಕೊಂಡಿರುವ ಮಹಿಳೆ, ತಾನು ಪ್ರಜ್ಞಾಹೀನಳಾಗಿದ್ದಾಗ ರಾಜ್ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.