ಮುಂಬೈ: ಐಸಿಐಸಿಐ ಬ್ಯಾಂಕ್ ಸಾಲ ವಂಚನೆ ಪ್ರಕರಣದಲ್ಲಿ ಬ್ಯಾಂಕ್‌ನ ಮಾಜಿ ಸಿಇಒ ಚಂದಾ ಕೊಚ್ಚರ್, ಅವರ ಪತಿ ದೀಪಕ್‌ಕೊಚ್ಚರ್ ಮತ್ತು ವಿಡಿಯೊಕಾನ್ ಸಮೂಹದ ಸಂಸ್ಥಾಪಕ ವೇಣುಗೋಪಾಲ್ ಧೂತ್ ಅವರನ್ನು ಗುರುವಾರ ಇಲ್ಲಿನ ವಿಶೇಷ ಸಿಬಿಐ ನ್ಯಾಯಾಲಯವು ಜನವರಿ 10ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಕೊಚ್ಚರ್ ದಂಪತಿಯನ್ನು ಕಳೆದ ಶುಕ್ರವಾರ ಹಾಗೂ ವೇಣುಗೋಪಾಲ್ ಅವರನ್ನು ಸೋಮವಾರ ಸಿಬಿಐ ಬಂಧಿಸಿತ್ತು.
2019ರಲ್ಲಿ ದಾಖಲಿಸಿದ್ದ ಎಫ್‌ಐಆರ್‌ನಲ್ಲಿ ಕೊಚ್ಚರ್ ದಂಪತಿ, ವಿಡಿಯೊಕಾನ್ ಸಂಸ್ಥೆಯ ಸ್ಥಾಪಕ ವೇಣುಗೋಪಾಲ್ ಧೂತ್, ದೀಪಕ್ ನಿರ್ವಹಿಸುತ್ತಿರುವ ನೂಪವರ್ ರಿನೀವಬಲ್, ಸುಪ್ರೀಂ ಎನರ್ಜಿ ಪ್ರೈವೇಟ್ ಲಿಮಿಟೆಡ್, ವಿಡಿಯೊಕಾನ್ ಇಂಟರ್‌ನ್ಯಾಷನಲ್ ಎಲೆಕ್ಟ್ರಾನಿಕ್ಸ್, ವಿಡಿಯೊಕಾನ್ ಇಂಡಸ್ಟ್ರೀಸ್ ಅನ್ನು ಸಿಬಿಐ ಹೆಸರಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.