ಲಖನೌ: ಉತ್ತರ ಪ್ರದೇಶದ ಅಮೇಠಿಯಲ್ಲಿ ಭಾನುವಾರ ರಾತ್ರಿ ನಡೆದಿದ್ದ ಸ್ಮೃತಿ ಇರಾನಿ ಬೆಂಬಲಿಗ ಸುರೇಂದ್ರ ಸಿಂಗ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕೃತವಾಗಿ ಸೋಮವಾರ ಮಾಹಿತಿ ನೀಡಿರುವ ಪೊಲೀಸರು, ‘ಸ್ಥಳೀಯ ರಾಜಕೀಯ ವೈಷಮ್ಯವೇ ಹತ್ಯೆಗೆ ಕಾರಣ,’ ಎಂದು ತಿಳಿಸಿದ್ದಾರೆ.
‘ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿದ್ದೇವೆ. ಇನ್ನಿಬ್ಬರು ಶಂಕಿತರು ತಲೆಮರೆಸಿಕೊಂಡಿದ್ದಾರೆ. ಅವರನ್ನು ಅತಿಶೀಘ್ರದಲ್ಲೇ ಬಂಧಿಸುತ್ತೇವೆ. ಮೃತ ವ್ಯಕ್ತಿ ಮತ್ತು ಐವರು ಹಂಕತರ ನಡುವೆ ಸ್ಥಳೀಯ ಮಟ್ಟದ ರಾಜಕೀಯ ಧ್ವೇಷವಿತ್ತು ಎಂಬುದು ಪ್ರಕರಣದ ತನಿಖೆ ವೇಳೆ ನಮಗೆ ತಿಳಿದು ಬಂದಿದೆ,’ಎಂದು ಉತ್ತರ ಪ್ರದೇಶದ ಪೊಲೀಸ್ ಆಯುಕ್ತ ಒ.ಪಿ ಸಿಂಗ್ ತಿಳಿಸಿದ್ದಾರೆ.
ಸ್ಮೃತಿ ಇರಾನಿ ಅವರ ಬೆಂಬಲಿಗ, ಬಿಜೆಪಿ ಕಾರ್ಯಕರ್ತ ಸುರೇಂದ್ರ ಸಿಂಗ್ ಮೇಲೆ ಭಾನುವಾರ ಬೆಳಗ್ಗೆ 3 ಗಂಟೆ ಸುಮಾರಿನಲ್ಲಿ ಗುಂಡಿನ ದಾಳಿ ನಡೆಸಲಾಗಿತ್ತು. ಆಸ್ಪತ್ರೆಗೆ ಸೇರಿಸುವ ಮಾರ್ಗ ಮದ್ಯೆ ಸುರೇಂದ್ರ ಸಿಂಗ್ ಅಸುನೀಗಿದ್ದರು. ಇದು ಅಮೇಠಿ ಮಟ್ಟಿಗೆ ರಾಜಕೀಯ ಸ್ವರೂಪ ಪಡೆದುಕೊಂಡಿತು.
ಆರೋಪಿಗಳು ಮತ್ತು ಅವರ ಹಿಂದೆ ಇರುವವರಿಗೆಮರಣದಂಡನೆ ಶಿಕ್ಷೆ ಕೊಡಿಸಲು ನಾನುಸುಪ್ರೀಂ ಕೋರ್ಟ್ ವರೆಗೆ ನ್ಯಾಯಾಂಗ ಹೋರಾಟ ನಡೆಸುತ್ತೇನೆ ಎಂದುಸ್ಮೃತಿ ಇರಾನಿ ಅವರು ಸುರೇಂದ್ರ ಸಿಂಗ್ ಅಂತ್ಯ ಸಂಸ್ಕಾರದ ವೇಳೆಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.