ನವದೆಹಲಿ: ವಿವಿಧ ವಿಷಯಗಳ ಕುರಿತು ಪ್ರತಿಪಕ್ಷಗಳ ಸದಸ್ಯರ ಗದ್ದಲದ ನಡುವೆ ಸೋಮವಾರ ಯಾವುದೇ ಮಹತ್ವದ ಕಲಾಪ ನಡೆಯದೆ ಲೋಕಸಭೆ ಅಧಿವೇಶನವನ್ನು ಬುಧವಾರದವರೆಗೆ ಮುಂದೂಡಲಾಯಿತು.
ವಿರಾಮದ ಬಳಿಕ 12 ಗಂಟೆಗೆ ಸದನ ಸೇರಿದ ಬಳಿಕ ಪ್ರತಿಪಕ್ಷದ ಸದಸ್ಯರು ಉತ್ತರ ಪ್ರದೇಶದ ಸಂಭಲ್‌ನಲ್ಲಿ ನಡೆದ ಹಿಂಸಾಚಾರ ಖಂಡಿಸಿ ಘೋಷಣೆಗಳನ್ನು ಕೂಗಿದರು. ಜತೆಗೆ ಅಮೆರಿಕ ನ್ಯಾಯಾಲಯದಲ್ಲಿ ಉದ್ಯಮಿ ವಿರುದ್ಧದ ಆರೋಪಗಳ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.
ವಿಪಕ್ಷಗಳ ಗದ್ದಲದ ಹಿನ್ನೆಲೆ ಸಭಾಪತಿ ಕಲಾಪವನ್ನು ಬುಧವಾರಕ್ಕೆ ಮುಂದೂಡಿದರು.
ಅಧಿವೇಶನದ ಮೊದಲ ದಿನದಂದು ಸದನವು ಸಭೆ ಸೇರಿದ ತಕ್ಷಣ, ಮಹಾರಾಷ್ಟ್ರದ ನಾಂದೇಡ್ ಕ್ಷೇತ್ರದಿಂದ ಸದನಕ್ಕೆ ಚುನಾಯಿತರಾಗಿದ್ದ ವಸಂತರಾವ್ ಚವಾಣ್ ಮತ್ತು ಪಶ್ಚಿಮ ಬಂಗಾಳದ ಬಸಿರ್ಹತ್ ಕ್ಷೇತ್ರದಿಂದ ಚುನಾಯಿತರಾಗಿದ್ದ ಎಸ್ಕೆ ನೂರುಲ್ ಇಸ್ಲಾಂ ಅವರ ನಿಧನಕ್ಕೆ ಸಂತಾಪ ಸೂಚಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.