ನವದೆಹಲಿ: ಪೆಗಾಸಸ್ ಗೂಢಚರ್ಯೆ ವಿವಾದ ಹಾಗೂ ಇತರ ವಿಷಯ ಕುರಿತು ವಿರೋಧಪಕ್ಷದ ಸದಸ್ಯರು ಸೋಮವಾರ ಲೋಕಸಭೆಯಲ್ಲಿ ಪ್ರತಿಭಟನೆ ಮುಂದುವರಿಸಿದ್ದರಿಂದ ಕಲಾಪವನ್ನು ಒಂದು ದಿನದ ಮಟ್ಟಿಗೆ ಮುಂದೂಡಲಾಯಿತು.
ಸ್ಪೀಕರ್ ಸ್ಥಾನದಲ್ಲಿದ್ದ ರಮಾದೇವಿ ಅವರು ಕಲಾಪವನ್ನು ಮುಂದೂಡುವ ಮುನ್ನ, ಸಾಮಾನ್ಯ ವಿಮಾ ವ್ಯವಹಾರ (ರಾಷ್ಟ್ರೀಕರಣ) ತಿದ್ದುಪಡಿ ಮಸೂದೆಯನ್ನು ಸದನವು ಧ್ವನಿಮತದ ಮೂಲಕ ಅಂಗೀಕರಿಸಿತು.
ಮಧ್ಯಾಹ್ನ 3.30ರ ವೇಳೆಗೆ ಸದನ ಮತ್ತೆ ಸಭೆ ಸೇರಿದಾಗ, ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಚರ್ಚೆಗೊಡ್ಡಿದ ವಿಷಯದ ಕುರಿತು ಪ್ರತಿಕ್ರಿಯಿಸಲು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮುಂದಾದರು. ಆದರೆ, ಅದೇ ವೇಳೆ ವಿರೋಧಪಕ್ಷದ ಸದಸ್ಯರು ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದರು.
ಗದ್ದಲ ಮುಂದುವರಿದಂತೆ, ಮಸೂದೆಯನ್ನು ಅಂಗೀಕರಿಸಲು ಸಚಿವರು ಪ್ರಯತ್ನಿಸಿದರು. ಕೊನೆಗೆ ಸಾಮಾನ್ಯ ವಿಮಾ ವ್ಯವಹಾರ (ರಾಷ್ಟ್ರೀಕರಣ) ತಿದ್ದುಪಡಿ ಮಸೂದೆಯನ್ನು ಧ್ವನಿಮತದ ಮೂಲಕ ಸದನವು ಅನುಮೋದಿಸಿತು. ನಂತರ ಕಲಾಪ ಮುಂದೂಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.