ನವದೆಹಲಿ: ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದದ ವಿಚಾರದಲ್ಲಿ ‘ಚೌಕೀದಾರ್ ಚೋರ್’ ಎಂದು ಸುಪ್ರೀಂ ಕೋರ್ಟ್ ಕೂಡ ಹೇಳಿದೆ ಎಂಬ ಹೇಳಿಕೆಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿಷಾದ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ಅವರು ರಾಹುಲ್ ಹೇಳಿಕೆ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ದೂರು ದಾಖಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ಕೋರ್ಟ್, ತನ್ನ ಅಭಿಪ್ರಾಯವನ್ನು ತಪ್ಪಾಗಿ ಬಳಸಿಕೊಳ್ಳಲಾಗಿದೆ ಎಂದು ಹೇಳಿತ್ತು. ಅದಕ್ಕೆ ಸ್ಪಷ್ಟೀಕರಣ ಕೊಡಲು ರಾಹುಲ್‌ಗೆ ಸೂಚಿಸಿತ್ತು.
ಚುನಾವಣಾ ಪ್ರಚಾರದ ಭರದಲ್ಲಿ ಈ ಹೇಳಿಕೆ ನೀಡಲಾಗಿದೆ. ಅದು ಉದ್ದೇಶಪೂರ್ವಕ ಅಲ್ಲ. ಯಾವುದೇ ರೀತಿಯಲ್ಲಿಯೂ ನ್ಯಾಯಾಲಯದ ಘನತೆಯನ್ನು ಕುಗ್ಗಿಸುವ ಉದ್ದೇಶ ಇರಲಿಲ್ಲ ಎಂದು 26 ಪುಟಗಳ ಪ್ರಮಾಣಪತ್ರದಲ್ಲಿ ರಾಹುಲ್ ಹೇಳಿದ್ದಾರೆ.
ರಾಹುಲ್ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ಒತ್ತಾಯಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.