ADVERTISEMENT

ಚುನಾವಣಾ ಫಲಿತಾಂಶ ಮೇಲೆ ಪ್ರಭಾವ ಬೀರಲು ಅಮಿತ್ ಶಾ ಯತ್ನ: ಜೈರಾಮ್ ರಮೇಶ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ಜೂನ್ 2024, 13:02 IST
Last Updated 1 ಜೂನ್ 2024, 13:02 IST
ಜೈರಾಮ್‌ ರಮೇಶ್‌ 
ಜೈರಾಮ್‌ ರಮೇಶ್‌    

ನವದೆಹಲಿ: ‘ಜಿಲ್ಲಾ ಚುನಾವಣಾ ಅಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿಗಳಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕರೆ ಮಾಡಿ, ಬೆದರಿಕೆ ಹಾಕುತ್ತಿದ್ದಾರೆ’ ಎಂದು ಕಾಂಗ್ರೆಸ್‌ ಶನಿವಾರ ಆರೋಪಿಸಿದೆ.

ದೇಶದ 150 ಜಿಲ್ಲಾಧಿಕಾರಿಗಳೊಂದಿಗೆ ಸಚಿವ ಶಾ ಅವರು ಈಗಾಗಲೇ ಮಾತನಾಡಿದ್ದಾರೆ. ಇದು ಬಿಜೆಪಿಯ ಹತಾಶೆಯನ್ನು ತೋರಿಸುತ್ತದೆ’ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿದ್ದಾರೆ.

‘ಅಧಿಕಾರದಿಂದ ಕೆಳಗಿಳಿಯಲಿರುವ ಕೇಂದ್ರ ಗೃಹ ಸಚಿವರು ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಬೆದರಿಕೆ ಒಡ್ಡುತ್ತಿರುವುದು ನಾಚಿಕೆಗೇಡಿನ ವಿಷಯ. ಅಧಿಕಾರಿಗಳು ಯಾವುದೇ ಒತ್ತಡಕ್ಕೆ ಮಣಿಯದೇ, ಸಂವಿಧಾನವನ್ನು ಎತ್ತಿಹಿಡಿಯಬೇಕು’ ಎಂದಿದ್ದಾರೆ.

ADVERTISEMENT

‘ಜನರ ಆಶಯ ಈಡೇರುವುದು ಸ್ಪಷ್ಟ. ಜೂನ್‌ 4ರಂದು ನರೇಂದ್ರ ಮೋದಿ, ಶಾ ಮತ್ತು ಬಿಜೆಪಿಯ ನಿರ್ಗಮನ ಹಾಗೂ ‘ಇಂಡಿಯಾ’ ಒಕ್ಕೂಟದ ಗೆಲುವು ಖಚಿತ’ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.