ನವದೆಹಲಿ: ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಅಜಯ್ ರೈ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾರಾಣಸಿಯಿಂದ ಹಾಗೂ ಮಧ್ಯಪ್ರದೇಶ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಅರುಣ್ ಯಾದವ್ ಅವರು ಗುನಾ ಕ್ಷೇತ್ರದಲ್ಲಿ ಕೇಂದ್ರ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ವಿರುದ್ಧ ಸ್ಪರ್ಧಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಶುಕ್ರವಾರವೂ ಸಿಇಸಿ ಸಭೆ ಸೇರಲಿದ್ದು, ಅಮೇಠಿ, ರಾಯ್‌ಬರೇಲಿ ಮುಂತಾದ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಖೈರುಗೊಳಿಸುವ ಸಾಧ್ಯತೆ ಇದೆ.
ಇನ್ನೊಂದು ಮೂಲಗಳ ಪ್ರಕಾರ ನಟಿ ಸ್ವರಾ ಭಾಸ್ಕರ್ ಅವರು ಮುಂಬೈ ಉತ್ತರ ಕೇಂದ್ರ ಕ್ಷೇತ್ರದಿಂದ ಟಿಕೆಟ್ ಬಯಸಿ ಕಾಂಗ್ರೆಸ್ ನಾಯಕರನ್ನು ಸಂಪರ್ಕಿಸಿದ್ದಾರೆ. ಮಹಾರಾಷ್ಟ್ರದ ಕಾಂಗ್ರೆಸ್ ಉಸ್ತುವಾರಿ ರಮೇಶ್ ಚನ್ನಿತ್ತಲ ಮೂಲಕ ಅವರು ಕಾಂಗ್ರೆಸ್ ಹೈಕಮಾಂಡ್ ಅನ್ನು ಸಂಪರ್ಕಿಸಿದ್ದಾರೆ ಎನ್ನಲಾಗಿದೆ.
ಜಾನಪದ ಗಾಯಕಿ ನೇಹಾ ರಾಥೋಡ್ ಅವರು ಕೂಡ ಕಾಂಗ್ರೆಸ್‌ನಿಂದ ಕಣಕ್ಕಿಳಿಯುವ ಅಭಿಲಾಷೆ ವ್ಯಕ್ತಪಡಿಸಿದ್ದಾರೆ ಎಂದು ಗೊತ್ತಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.