ADVERTISEMENT

ಜಮ್ಮು ಮತ್ತು ಕಾಶ್ಮೀರ 2024–25ನೇ ಸಾಲಿನ ಬಜೆಟ್‌ಗೆ ಲೋಕಸಭೆ ಅನುಮೋದನೆ

ಪಿಟಿಐ
Published 30 ಜುಲೈ 2024, 14:53 IST
Last Updated 30 ಜುಲೈ 2024, 14:53 IST
<div class="paragraphs"><p>ಲೋಕಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಮಾತನಾಡಿದರು</p></div>

ಲೋಕಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಮಾತನಾಡಿದರು

   

ಪಿಟಿಐ ಚಿತ್ರ

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ 2024–25ನೇ ಸಾಲಿನ ಬಜೆಟ್‌ಗೆ ಲೋಕಸಭೆಯಲ್ಲಿ ಮಂಗಳವಾರ ಅನುಮೋದನೆ ದೊರೆತಿದೆ.

ADVERTISEMENT

ಧ್ವನಿ ಮತದ ಮೂಲಕ ಜಮ್ಮ ಮತ್ತು ಕಾಶ್ಮೀರದ ಬಜೆಟ್‌ಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅನುಮೋದನೆ ಪಡೆದರು.

ಬಜೆಟ್‌ ಮೇಲಿನ ಚರ್ಚೆಯಲ್ಲಿ ಉತ್ತರಿಸಿದ ನಿರ್ಮಲಾ ಸೀತಾರಾಮನ್, ‘ಕೇಂದ್ರ ಸರ್ಕಾರದ ವಿತ್ತೀಯ ಕೊರತೆಯನ್ನು 2024–25ರವರೆಗೆ ಜಿಡಿಪಿಯ ಶೇ 4.9ರಷ್ಟು ತಗ್ಗಿಸಲಾಗಿದೆ. 2025–26ನೇ ಸಾಲಿನಲ್ಲಿ ಇದನ್ನು ಶೇ 4.5ಕ್ಕೆ ತರಲಾಗುವುದು’ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿಯ ನಿಬಂಧನೆಗಳನ್ನು ರದ್ದುಪಡಿಸಿದ ನಂತರ ಅಲ್ಲಿ ಚುನಾಯಿತ ಸರ್ಕಾರ ಇನ್ನಷ್ಟೇ ಸ್ಥಾಪನೆಯಾಗಬೇಕಿದೆ. ಹೀಗಾಗಿ ಹಿಂದಿನ ಸಾಲಿನಂತೆಯೇ ಜಮ್ಮು ಮತ್ತು ಕಾಶ್ಮೀರದ ಬಜೆಟ್‌ ಅನ್ನು ಲೋಕಸಭೆಯಲ್ಲಿ ಈ ಬಾರಿಯೂ ಮಂಡಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.