ADVERTISEMENT

ಲೋಕಸಭಾ ಚುನಾವಣೆಯಲ್ಲಿ ಬಿಎಸ್‌ಪಿ ಏಕಾಂಗಿ ಸ್ಪರ್ಧೆ: ಮಾಯಾವತಿ

ಪಿಟಿಐ
Published 9 ಮಾರ್ಚ್ 2024, 9:43 IST
Last Updated 9 ಮಾರ್ಚ್ 2024, 9:43 IST
ಮಾಯಾವತಿ
ಮಾಯಾವತಿ   

ಲಖನೌ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಉತ್ತರಪ್ರದೇಶದಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಪಕ್ಷದ ಮುಖ್ಯಸ್ಥೆ ಮಾಯಾವತಿ ಶನಿವಾರ ಹೇಳಿದರು. 

ಬಿಎಸ್‌ಪಿಯು ವಿರೋಧಪಕ್ಷಗಳ ಒಕ್ಕೂಟವಾದ ‘ಇಂಡಿಯಾ’ಕ್ಕೆ ಸೇರ್ಪಡೆಗೊಳ್ಳಲಿದೆ ಎಂಬ ವದಂತಿಗಳನ್ನು ಅವರು ಅಲ್ಲಗಳೆದರು.

ಮೈತ್ರಿಕೂಟಕ್ಕೆ ಸೇರ್ಪಡೆ ಕುರಿತ ವಂದಂತಿಗಳನ್ನು ಪ್ರಸಾರ ಮಾಡುವುದರಿಂದ ಮಾಧ್ಯಮಗಳು ವಿಶ್ವಾಸಾರ್ಹತೆಯನ್ನು ಕಳೆದುಕೊಳ್ಳುವ ಅಪಾಯವಿದೆ ಎಂದು ಅವರು ಎಕ್ಸ್‌ ಮಾಧ್ಯಮದಲ್ಲಿ ತಿಳಿಸಿದರು.

ADVERTISEMENT

ಬಿಎಸ್‌ಪಿಯು ಮೈತ್ರಿಕೂಟಕ್ಕೆ ಸೇರ್ಪಡೆಗೊಳ್ಳಲಿದೆ ಅಥವಾ ತೃತೀಯರಂಗ ರಚಿಸಲಿದೆ ಎಂಬುದು ಸುಳ್ಳು ಸುದ್ದಿ. ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸುವುದಕ್ಕೆ ಪೂರ್ಣ ತಯಾರಿ ನಡೆಸಿದೆ ಎಂದು ಅವರು ವಿವರಿಸಿದರು.

ಪ್ರತಿಸ್ಪರ್ಧಿ ಪಕ್ಷಗಳು ಜನರನ್ನು ದಾರಿ ತಪ್ಪಿಸಲು ವದಂತಿಗಳನ್ನು ಹಬ್ಬಿಸುತ್ತಿವೆ ಎಂದು ಅವರು ಆರೋಪಿಸಿದರು.

2019ರ ಲೋಕಸಭಾ ಚುನಾವಣೆಯಲ್ಲಿ ಬಿಎಸ್‌ಪಿಯು ಸಮಾಜವಾದಿ ಪಕ್ಷದ ಜೊತೆಗೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.