ADVERTISEMENT

ಪ. ಬಂಗಾಳದ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಿಸಿದ TMC, ಯೂಸುಫ್ ಪಠಾಣ್ ಕಣಕ್ಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಮಾರ್ಚ್ 2024, 9:32 IST
Last Updated 10 ಮಾರ್ಚ್ 2024, 9:32 IST
   

ಕೋಲ್ಕತ್ತ: ಮುಂಬರುವ ಲೋಕಸಭೆ ಚುನಾವಣೆಗೆ ಪಶ್ಚಿಮ ಬಂಗಾಳದ ಎಲ್;ಆ 42 ಕ್ಷೇತ್ರಗಳಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.

ಕೋಲ್ಕತ್ತದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಅಭಿಷೇಕ್ ಬ್ಯಾನರ್ಜಿಯವರು ಪಕ್ಷದ ಅಭ್ಯರ್ಥಿಗಳನ್ನು ಘೋಷಣೆ ಮಾಡಿದರು.

ಭಾರತ ತಂಡದ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಅವರನ್ನು ಬೆಹ್ರಾಂಪುರ ಕ್ಷೇತ್ರದಿಂದ ಟಿಎಂಸಿ ಕಣಕ್ಕಿಳಿಸಿದೆ. ಈ ಕ್ಷೇತ್ರವನ್ನು ಈಗ ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಪ್ರತಿನಿಧಿಸುತ್ತಿದ್ದಾರೆ.

ADVERTISEMENT

ಡೈಮಂಡ್ ಹಾರ್ಬರ್ ಕ್ಷೇತ್ರದಿಂದ ಅಭಿಷೇಕ್ ಬ್ಯಾನರ್ಜಿ, ಅಸಾಂಸೋಲ್‌ನಿಂದ ಶತ್ರುಘನ್ ಸಿನ್ಹಾ, ಲೋಕಸಭೆ ಸದಸ್ಯತ್ವದಿಂದ ವಜಾಗೊಂಡಿರುವ ಮಹುವಾ ಮೊಯಿತ್ರಾ ಅವರು ಕೃಷ್ಣನಗರ ಕ್ಷೇತ್ರದಿಂದ, ಶ್ರೀರಾಮಪುರದಿಂದ ಕಲ್ಯಾಣ್ ಬ್ಯಾನರ್ಜಿ, ಭರ್ದಮಾನ್‌ನಿಂದ ಮಾಜಿ ಕ್ರಿಕೆಟಿಗ ಕೀರ್ತಿ ಅಜಾದ್‌, ಡಂ ಡಂನಿಂದ ಸುಗತಾ ರಾಯ್ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ.

ಕಳೆದ ಬಾರಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಸಿನಿಮಾ ತಾರೆಯರಾದ ಮಿಮಿ ಚಕ್ರವರ್ತಿ ಹಾಗೂ ನುಸ್ರತ್ ಜಹಾನ್‌ ಅವರಿಗೆ ಈ ಬಾರಿ ಟಿಕೆಟ್ ಲಭಿಸಿಲ್ಲ.

ಪಶ್ಚಿಮ ಬಂಗಾಳ ಹೊರತುಪಡಿಸಿ ಅಸ್ಸಾಂ, ಉತ್ತರ ಪ್ರದೇಶ ಹಾಗೂ ಮೇಘಾಲಯದಲ್ಲಿ ಟಿಎಂಸಿ ಸ್ಪರ್ಧೆ ಮಾಡಲಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದೇ ವೇಳೆ ಹೇಳಿದರು. ಉತ್ತರ ಪ್ರದೇಶದಲ್ಲಿ ಸೀಟು ಹಂಚಿಕೆಯ ಬಗ್ಗೆ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಜೊತೆ ಮಾತುಕತೆ ನಡೆದಿದ್ದಾಗಿಯೂ ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.