ADVERTISEMENT

Parliament | ಇದೀಗ ಅಧಿಕೃತ; ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಜೂನ್ 2024, 11:08 IST
Last Updated 26 ಜೂನ್ 2024, 11:08 IST
<div class="paragraphs"><p>ನರೇಂದ್ರ ಮೋದಿ, ರಾಹುಲ್ ಗಾಂಧಿ, ಓಂ ಬಿರ್ಲಾ</p></div>

ನರೇಂದ್ರ ಮೋದಿ, ರಾಹುಲ್ ಗಾಂಧಿ, ಓಂ ಬಿರ್ಲಾ

   

(ಪಿಟಿಐ ಚಿತ್ರ)

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಲೋಕಸಭೆಯಲ್ಲಿ ಅಧಿಕೃತ ವಿರೋಧ ಪಕ್ಷದ ನಾಯಕರ ಸ್ಥಾನಮಾನ ನೀಡಲಾಗಿದೆ ಎಂದು ಸ್ಪೀಕರ್ ಓಂ ಬಿರ್ಲಾ ಘೋಷಿಸಿದ್ದಾರೆ.

ADVERTISEMENT

ಈ ಸಂಬಂಧ ಬುಧವಾರ ಲೋಕಸಭೆಯ ಆಡಳಿತಾಧಿಕಾರಿ ಅಧಿಸೂಚನೆ ಹೊರಡಿಸಿದ್ದು, ರಾಹುಲ್ ಗಾಂಧಿ ಅವರು ಜೂನ್ 9ರಿಂದ ಜಾರಿಗೆ ಬರುವಂತೆ ವಿರೋಧ ಪಕ್ಷದ ನಾಯಕರಾಗಿದ್ದಾರೆ ಎಂದು ತಿಳಿಸಿದ್ದಾರೆ. 

ಈ ಮೊದಲು ಲೋಕಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ರಾಹುಲ್ ಗಾಂಧಿ ವಹಿಸಲಿದ್ದಾರೆ ಎಂದು ಕಾಂಗ್ರೆಸ್ ಘೋಷಿಸಿತ್ತು. ‘ಇಂಡಿಯಾ’ ಮೈತ್ರಿಕೂಟದ ನಾಯಕರ ಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನು ವಿರೋಧ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿತ್ತು.

ಇಂದೇ 18ನೇ ಲೋಕಸಭೆಯ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆಯಾಗಿದ್ದಾರೆ. ಆ ಮೂಲಕ ಸತತ ಎರಡನೇ ಬಾರಿ ಸ್ಪೀಕರ್ ಹುದ್ದೆಗೆ ಏರಿದ್ದಾರೆ. ಬಳಿಕ ಬಿರ್ಲಾ ಅವರನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಹುಲ್ ಗಾಂಧಿ ಅವರು ಅಭಿನಂದಿಸಿ ಪೀಠಕ್ಕೆ ಕರೆತಂದರು.

ಸ್ಪೀಕರ್ ಅವರನ್ನು ಸ್ವಾಗತಿಸಿ ಭಾಷಣ ಮಾಡಿದ ರಾಹುಲ್, 'ಸದನದಲ್ಲಿ ಮಾತನಾಡಲು ನಮಗೂ (ವಿಪಕ್ಷಗಳಿಗೆ) ಅವಕಾಶ ನೀಡುವ ನಂಬಿಕೆಯಿದೆ' ಎಂದು ಹೇಳಿದರು.

'ನೀವು ಜನರ ಧ್ವನಿಯ ಅಂತಿಮ ತೀರ್ಪುಗಾರರು. ಸರ್ಕಾರಕ್ಕೆ ರಾಜಕೀಯ ಬಲ ಇರಬಹುದು. ಆದರೆ ವಿಪಕ್ಷಗಳು ಜನರ ಧ್ವನಿಯನ್ನು ಪ್ರತಿನಿಧಿಸುತ್ತದೆ. ನಿಮ್ಮ ಕರ್ತವ್ಯಕ್ಕೆ ವಿಪಕ್ಷಗಳು ನೆರವಾಗಲು ಬಯಸುತ್ತದೆ' ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.