ದೆಹಲಿ: ಪ್ರಸ್ತುತ ಲೋಕಸಭೆಯ ಕೊನೆ ಅಧಿವೇಶನವಾದ ಬಜೆಟ್ ಅಧಿವೇಶನ ಇಂದು ಕೊನೆಗೊಳ್ಳಲಿದೆ.
ಈ ಹಿನ್ನೆಲೆಯಲ್ಲಿ ಶನಿವಾರ ಲೋಕಸಭೆಯಲ್ಲಿ ವಿಶೇಷವಾಗಿ ರಾಮ ಮಂದಿರ ನಿರ್ಮಾಣದ ವಿಷಯವನ್ನು ಚರ್ಚೆಗೆ ಎತ್ತಿಕೊಳ್ಳಲಾಗಿದೆ.
ರಾಮ ಮಂದಿರ ನಿರ್ಮಾಣ ಐತಿಹಾಸಿಕ ಎಂದು ಬಣ್ಣಿಸಿರುವ ಬಿಜೆಪಿ ಸದಸ್ಯರು ರಾಮ ಕೇವಲ ಒಂದು ಧರ್ಮಕ್ಕೆ ಸೇರಿದವನಲ್ಲ ಎಂದು ಹೇಳಿದ್ದಾರೆ. ಇದೇ ವೇಳೆ ತಮಿಳುನಾಡು ಮೀನಗಾರರನ್ನು ಶ್ರೀಲಂಕಾ ನೌಕಾದಳದವರು ಬಂಧಿಸಿರುವುದಕ್ಕೆ ಲೋಕಸಭೆಯಲ್ಲಿ ಡಿಎಂಕೆ ಸಂಸದರು ಗದ್ದಲ ಎಬ್ಬಿಸಿದ್ದರು.
ಸಂಸತ್ತಿನ ಬಜೆಟ್ ಅಧಿವೇಶನವು ಜನವರಿ 31ರಂದು ಪ್ರಾರಂಭವಾಗಿದ್ದು, ಇಂದು(ಶನಿವಾರ) ಕೊನೆಗೊಳ್ಳಲಿದೆ. ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯುವ ನಿರೀಕ್ಷೆ ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.