ADVERTISEMENT

ಏರ್ ಇಂಡಿಯಾ ವಿಮಾನಕ್ಕೆ ಹುಸಿ ಬಾಂಬ್‌ ಬೆದರಿಕೆ: ವ್ಯಕ್ತಿ ಬಂಧನ

ಪಿಟಿಐ
Published 25 ಜೂನ್ 2024, 14:31 IST
Last Updated 25 ಜೂನ್ 2024, 14:31 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕೊಚ್ಚಿ: ಕೇರಳದ ಕೊಚ್ಚಿಯಿಂದ ಲಂಡನ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನಕ್ಕೆ ಹುಸಿ ಬಾಂಬ್‌ ಬೆದರಿಕೆ ಹಾಕಿದ್ದ ಶಂಕಿತ ಯುವಕನನ್ನು ವಶಕ್ಕೆ ಪಡೆದಿರುವುದಾಗಿ ಅಧಿಕಾರಿ ತಿಳಿಸಿದ್ದಾರೆ.

ಬೆಳಿಗ್ಗೆ 11.50ಕ್ಕೆ ಹೊರಡಬೇಕಿದ್ದ ಎಐ149 ವಿಮಾನವು ಟೇಕಾಫ್ ಆಗುವ ಮೊದಲು ಅನಾಮಧೇಯ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿತ್ತು. ಈ ಹಿನ್ನೆಲೆಯಲ್ಲಿ ವಿಮಾನವನ್ನು ತೀವ್ರ ತಪಾಸಣೆಗೆ ಒಳಪಡಿಸಲಾಯಿತು. ವಿಮಾನದಲ್ಲಿ ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗದ ಹಿನ್ನೆಲೆಯಲ್ಲಿ ಇದೊಂದು ಹುಸಿ ಬಾಂಬ್‌ ಕರೆ ಎನ್ನುವುದು ಬೆಳಿಗ್ಗೆ 10:30ಕ್ಕೆ ಖಚಿತವಾಯಿತು. ಅಂತಿಮವಾಗಿ ವಿಮಾನವು ಮಧ್ಯಾಹ್ನ 1.25ಕ್ಕೆ ಟೇಕಾಫ್‌ ಆಯಿತು ಎಂದು ಕೊಚ್ಚಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ.

ಸದ್ಯ ಅಧಿಕಾರಿಗಳು ವಶಕ್ಕೆ ‍ಪಡೆದಿರುವ ಆರೋಪಿಯನ್ನು ಕೇರಳದ ಮಲಪ್ಪುರಂ ಜಿಲ್ಲೆಯ ಸುಹೈಬ್‌(29) ಎಂದು ಗುರುತಿಸಲಾಗಿದೆ. ಈತ ಇದೇ ವಿಮಾನದಲ್ಲಿ ಲಂಡನ್‌ಗೆ ತೆರಳಲು ಟಿಕೆಟ್‌ ಬುಕ್‌ ಮಾಡಿದ್ದ ಎಂಬುದು ಪ್ರಾಥಮಿಕ ತನಿಖೆಯ ವೇಳೆ ತಿಳಿದುಬಂದಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.