ADVERTISEMENT

ಬಿಹಾರ | ಹಿಂಸಾಚಾರದ ನೆಪದಲ್ಲಿ ಅಂಗಡಿಗಳ ಲೂಟಿ: 27 ಮಂದಿ ಬಂಧನ 

ಐಎಎನ್ಎಸ್
Published 2 ಏಪ್ರಿಲ್ 2023, 4:58 IST
Last Updated 2 ಏಪ್ರಿಲ್ 2023, 4:58 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಪಟ್ನಾ: ನಳಂದ ಜಿಲ್ಲೆಯಲ್ಲಿ ಗುರುವಾರ ಸಂಭವಿಸಿದ ಹಿಂಸಾಚಾರ ವೇಳೆ ಹಲವಾರು ಅಂಗಡಿಗಳನ್ನು ಲೂಟಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಮ ನವಮಿ ನಿಮಿತ್ತ ಶೋಭಾ ಯಾತ್ರೆ ವೇಳೆ ಘರ್ಷಣೆ ನಡೆದಿತ್ತು. ಆರೋಪಿಗಳು ಹಿಂಸಾಚಾರದ ನೆಪದಲ್ಲಿ ಅಂಗಡಿಗಳಲ್ಲಿದ್ದ ಬೆಲೆ ಬಾಳುವ ವಸ್ತುಗಳನ್ನು ಲೂಟಿ ಮಾಡುತ್ತಿರುವುದು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಹಿಂಸಾಚಾರದ ಭೀತಿಯಿಂದಾಗಿ ಅಂಗಡಿಗಳನ್ನು ವ್ಯಾಪಾರಸ್ಥರು ಹಾಗೂ ಮಾಲೀಕರು ಮುಚ್ಚಿದ್ದರು ಎಂದು ಪೊಲೀಸರು ಹೇಳಿದ್ದಾರೆ.

27 ಮಂದಿಯನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದೇವೆ. ಅಪರಾಧಿಗಳನ್ನು ಗುರುತಿಸಲು ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಲಾಗುತ್ತಿದೆ. ಸಂತ್ರಸ್ತರಿಗೆ ಪರಿಹಾರ ನೀಡಲಾಗುವುದು ಎಂದು ನಳಂದ ಜಿಲ್ಲಾಧಿಕಾರಿ ಶಶಾಂಕ್ ಶುಭಂಕರ್ ಮಾಹಿತಿ ನೀಡಿದ್ದಾರೆ.

ADVERTISEMENT

ಹಿಂಸಾಚಾರದಲ್ಲಿ ಖಾಸಗಿ ಮತ್ತು ಸರ್ಕಾರಿ ಆಸ್ತಿಗಳಿಗೆ ಹಾನಿಯಾಗಿದೆ. ಯಾವುದೇ ಅಹಿತಕರ ಘಟನೆಗಳನ್ನು ನಡೆಯದಂತೆ ಕ್ರಮಕೈಗೊಳ್ಳಲು ಭದ್ರತಾ ಪಡೆಗಳನ್ನು ನಿಯೋಜಿಸಿದ್ದೇವೆ ಎಂದು ನಳಂದಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಮಿಶ್ರಾ ಹೇಳಿದ್ದಾರೆ.

‘ಜಿಲ್ಲೆಯಲ್ಲಿ ಹಿಂಸಾಚಾರ ನಡೆದ ಪ್ರದೇಶದಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಪಥ ಸಂಚಲನ ಸಹ ನಡೆಸಿದ್ದೇವೆ. ಜಿಲ್ಲೆಯಿಂದ ಜನರು ವಲಸೆ ಹೋಗುತ್ತಿದ್ದಾರೆ ಎಂಬ ವದಂತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಲಾಗುತ್ತಿದ್ದು, ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ನಿಗಾ ಇಡಲಾಗುವುದು ಎಂದು ಸಸಾರಾಮ್ ಪೊಲೀಸ್ ಅಧೀಕ್ಷಕ ವಿನೀತ್ ಕುಮಾರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.