ADVERTISEMENT

ಅಕ್ಟೋಬರ್‌ 23ರಂದು ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಸಾಧ್ಯತೆ: ಹವಾಮಾನ ಇಲಾಖೆ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2024, 13:36 IST
Last Updated 21 ಅಕ್ಟೋಬರ್ 2024, 13:36 IST
   

ಅಮರಾವತಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದರಿಂದಾಗಿ ಅ.23ರ ವೇಳೆಗೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಸೋಮವಾರ ತಿಳಿಸಿದೆ. 

ಪೂರ್ವ– ಮಧ್ಯ ಬಂಗಾಳಕೊಲ್ಲಿ ಹಾಗೂ ಅಂಡಮಾನ್ ಸಮುದ್ರದ ಉತ್ತರಕ್ಕೆ ವಾಯುಭಾರ ಕುಸಿತ ಉಂಟಾಗಿದೆ. ಇದು ‍ಪಶ್ಚಿಮ– ವಾಯುವ್ಯ ದಿಕ್ಕಿನೆಡೆಗೆ ಚಲಿಸುವ ಸಾಧ್ಯತೆ ಇದೆ. ಅ.23ರಂದು ಪೂರ್ವ– ಮಧ್ಯ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ತೀವ್ರಗೊಳ್ಳುವ ಸಾಧ್ಯತೆ ಇದೆ.

ನಂತರ ಚಂಡಮಾರುತವು ವಾಯುವ್ಯಕ್ಕೆ ಚಲಿಸುವ ಸಾಧ್ಯತೆ ಇದ್ದು, ಅ.24ರ ಮುಂಜಾನೆ ಒಡಿಶಾ– ಪಶ್ಚಿಮ ಬಂಗಾಳ ಕರಾವಳಿಯಿಂದ ವಾಯುವ್ಯ ಬಂಗಾಳಕೊಲ್ಲಿಯನ್ನು ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.