ನವದೆಹಲಿ: ಸಬ್ಸಿಡಿಯಲ್ಲಿ ನೀಡುವ ಅಡುಗೆ ಅನಿಲ ಸಿಲಿಂಡರ್ ದರವನ್ನು ₹1.76ರಷ್ಟು ಹೆಚ್ಚಿಸಲಾಗಿದೆ. ಮಂಗಳವಾರ ಮಧ್ಯರಾತ್ರಿಯಿಂದಲೇ ಹೊಸ ದರ ಜಾರಿಗೆ ಬಂದಿದೆ.
’ತೆರಿಗೆ ಪರಿಣಾಮಗಳಿಂದಾಗಿ ದರ ಹೆಚ್ಚಿಸಲಾಗಿದೆ’ ಎಂದು ಭಾರತೀಯ ತೈಲ ನಿಗಮದ ಪ್ರಕಟಣೆ ತಿಳಿಸಿದೆ.
’ತೆರಿಗೆ ಕಾನೂನಿನ ಪ್ರಕಾರ ಎಲ್‌ಪಿಜಿ ಮೇಲಿನ ಜಿಎಸ್‌ಟಿ ಲೆಕ್ಕಾಚಾರ ಹಾಕಬೇಕಾಗುತ್ತದೆ. ಮಾರುಕಟ್ಟೆ ದರದ ಆಧಾರದ ಮೇಲೆಯೇ ತೆರಿಗೆ ಪಾವತಿಸಬೇಕಾಗುತ್ತದೆ. ಜಿಎಸ್‌ಟಿಯಿಂದಾಗಿ ಸಬ್ಸಿಡಿ ರಹಿತ ಅನಿಲ ಸಿಲಿಂಡರ್ ದರ ಪರಿಷ್ಕರಿಸಿದ್ದರಿಂದ ಸಬ್ಸಿಡಿ ಸಹಿತ ಸಿಲಿಂಡರ್ ದರವೂ ಹೆಚ್ಚಳವಾಗಿದೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.