ನವದೆಹಲಿ: ಚಿಕ್ಕಮಕ್ಕಳ ಆರೋಗ್ಯ ರಕ್ಷಣೆ ಉದ್ದೇಶದಿಂದ ಕೇಂದ್ರ ಸರ್ಕಾರ 2013ರಲ್ಲಿ ಪರಿಚಯಿಸಿರುವ ಬಾಲ ಸ್ವಾಸ್ಥ್ಯ‘ರಾಷ್ಟ್ರೀಯ’ ಕಾರ್ಯಕ್ರಮದ ಸಮರ್ಪಕ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಸದಸ್ಯ ಆರ್.ಧ್ರುವನಾರಾಯಣ ಆಗ್ರಹಿಸಿದರು.
ಲೋಕಸಭೆಯಲ್ಲಿ ಶುಕ್ರವಾರ ಶೂನ್ಯವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ದೇಶದಲ್ಲಿರುವ ಪ್ರತಿ ಎಂಟು ಮಕ್ಕಳಲ್ಲಿ ಒಂದು ಮಗು ನರಸಂಬಂಧಿ ದೌರ್ಬಲ್ಯದಿಂದ ನರಳುತ್ತ ಹಲವು ವೈಕಲ್ಯಗಳಿಗೆ ತುತ್ತಾಗುತ್ತಿದೆ. ಆ ಮಗು ಕಲಿಕೆಯಲ್ಲೂ ಹಿಂದುಳಿಯುವಂತಾಗಿದೆ ಎಂದು ಹೇಳಿದರು.
ಮಕ್ಕಳ ಆರೋಗ್ಯ ರಕ್ಷಣೆಯ ನಿಟ್ಟಿನಲ್ಲಿ ಉದ್ದೇಶಿತ ಬಾಲ ಸ್ವಾಸ್ಥ್ಯ ಕಾರ್ಯಕ್ರಮವನ್ನು ಜಾರಿಗೊಳಿಸುವಲ್ಲಿ ಕ್ರಮ ಕೈಗೊಳ್ಳಲಾಗಿಲ್ಲ. ಸಂಬಂಧಿಸಿದ ಸಚಿವಾಲಯವು ಕೂಡಲೇ ಈ ಕಾರ್ಯಕ್ರಮದ ಜಾರಿಗೆ ಮುಂದಾಗುವ ಮೂಲಕ ಮಕ್ಕಳ ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಬೇಕು ಎಂದು ಅವರು ಮನವಿ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.