ಪಾಟ್ನಾ: 400 ದಾಟುವ (400 ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ) ಪ್ರಧಾನಿ ನರೇಂದ್ರ ಮೋದಿ ಅವರ ಸಿನಿಮಾ ಮೊದಲ ಹಂತದ ಮತದಾನದ ವೇಳೆಯೇ ಫ್ಲಾಪ್ ಆಗಿದೆ. ಎರಡನೇ ಹಂತದ ಮತದಾನಲ್ಲೂ ಸಿನಿಮಾ ವಿಫಲವಾಗಿದೆ ಎಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಹೇಳಿದರು.
ಈ ಬಗ್ಗೆ ಎಎನ್‌ಐ ಸುದ್ದಿ ಸಂಸ್ಥೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.
ಪಟ್ನಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎರಡನೇ ಹಂತದ ಮತದಾನದ ಬಳಿಕ ಬಿಜೆಪಿಯವರು ಖಿನ್ನತೆಗೆ ಒಳಗಾಗಿದ್ದಾರೆ. ಇಲ್ಲಿನ ಸಮಸ್ಯೆಗಳ ಬಗ್ಗೆ, ಅಭಿವೃದ್ಧಿಯ ಬಗ್ಗೆ ಪ್ರಧಾನಿ ಮಾತನಾಡುತ್ತಿಲ್ಲ ಎಂದು ಇಲ್ಲಿನ ಜನ ಹೇಳುತ್ತಿದ್ದಾರೆ. ಉದ್ಯೋಗ ಸಿಗುವುದೂ ಕಷ್ಟವಾಗಿದೆ. ದೇಶದ ಜನರು ಸಹಿಸಿಕೊಳ್ಳಲಾರದಷ್ಟು ಸುಳ್ಳನ್ನು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ ಎಂದು ತೇಜಸ್ವಿ ಹೇಳಿದರು.
ಪ್ರಧಾನಿ ಶಿಕ್ಷಣದ ಬಗ್ಗೆ ಮಾತನಾಡುತ್ತಿಲ್ಲ. ಆರೋಗ್ಯ, ಆದಾಯ, ರೈತರು, ನಿರುದ್ಯೋಗದ ಬಗ್ಗೆ ಚಕಾರ ಎತ್ತುತ್ತಿಲ್ಲ ಎಂದು ಅವರು ಕಿಡಿಕಾರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.