ಹೈದರಾಬಾದ್: ತೆಲಂಗಾಣದಲ್ಲಿ ಬಿಸಿಗಾಳಿ ಹೆಚ್ಚಾಗಿದ್ದರಿಂದ ಚುನಾವಣಾ ಆಯೋಗವು ಮತದಾನದ ಅವಧಿಯನ್ನು ಒಂದು ತಾಸು ಹೆಚ್ಚಳ ಮಾಡಿ, ಬುಧವಾರ ಅಧಿಸೂಚನೆ ಹೊರಡಿಸಿದೆ.
ಈಗಿರುವ ಮತದಾನದ ಅವಧಿ ಬೆಳಿಗ್ಗೆ 7ರಿಂದ ಸಂಜೆ 5ಗಂಟೆಯನ್ನು ವಿಸ್ತರಿಸಲಾಗಿದೆ. ಪರಿಷ್ಕೃತ ಅವಧಿ ಅನ್ವಯ ಬೆಳಿಗ್ಗೆ 7ರಿಂದ ಸಂಜೆ 6ರವರೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ತೆಲಂಗಾಣದ ಎಲ್ಲ 17 ಲೋಕಸಭಾ ಕ್ಷೇತ್ರಗಳಿಗೂ ಮೇ 13ರಂದು ಚುನಾವಣೆ ನಡೆಯಲಿದೆ.
‘ತೆಲಂಗಾಣದ ಮುಖ್ಯ ಚುನಾವಣಾಧಿಕಾರಿಯವರ ವಿನಂತಿಯ ಮೇರೆಗೆ ಆಯೋಗ ಈ ನಿರ್ಧಾರ ಕೈಗೊಂಡಿದೆ’ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.