ADVERTISEMENT

ಫತೇಗಢ ಸಾಹಿಬ್‌ ಲೋಕಸಭಾ ಕ್ಷೇತ್ರ: ಗೇಜಾ ರಾಮ್‌ ಬಿಜೆಪಿ ಅಭ್ಯರ್ಥಿ

​ಪ್ರಜಾವಾಣಿ ವಾರ್ತೆ
Published 10 ಮೇ 2024, 14:25 IST
Last Updated 10 ಮೇ 2024, 14:25 IST
   

ಚಂಡೀಗಢ: ಪಂಜಾಬ್‌ನ ಫತೇಗಢ ಸಾಹಿಬ್‌ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯು ಗೇಜಾ ರಾಮ್‌ ವಾಲ್ಮೀಕಿ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ.

ವಾಲ್ಮೀಕಿ ಅವರು ಪಂಜಾಬ್‌ನ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾಗಿದ್ದಾರೆ. ಈ ಕ್ಷೇತ್ರದಿಂದ ಎಎಪಿಯು ಗುರುಪ್ರೀತ್‌ ಸಿಂಗ್‌ ಅವರನ್ನು ಹಾಗೂ ಕಾಂಗ್ರೆಸ್‌ ಪಕ್ಷವು ಅಮರ್‌ ಸಿಂಗ್‌ ಅವರನ್ನು ಅಖಾಡಕ್ಕಿಳಿಸಿದೆ. ಬಿಕ್ರಮ್‌ಜಿತ್‌ ಸಿಂಗ್‌ ಖಾಲ್ಸಾ ಅವರು ಶಿರೋಮಣಿ ಅಕಾಲಿ ದಳದಿಂದ ಸ್ಪರ್ಧಿಸುತ್ತಿದ್ದಾರೆ.

ಪಂಜಾಬ್‌ನ 13 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿಯು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಪಂಜಾಬ್‌ನಲ್ಲಿ ಜೂನ್‌ 1ರಂದು ಮತದಾನ ನಡೆಯಲಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.