ಲಖನೌ: ಈ ಬಾರಿಯ ಲೋಕಸಭೆ ಚುನಾವಣೆಗೆ ಕೇಂದ್ರ ರಕ್ಷಣಾ ಸಚಿವ ಮತ್ತು ಬಿಜೆಪಿಯ ಹಿರಿಯ ನಾಯಕ ರಾಜನಾಥ್ ಸಿಂಗ್ ಅವರು ಲಖನೌ ಲೋಕಸಭಾ ಕ್ಷೇತ್ರದಿಂದ ಸತತ ಮೂರನೇ ಬಾರಿಗೆ ನಾಮಪತ್ರ ಸಲ್ಲಿಸಿದ್ದಾರೆ.
ಜಿಲ್ಲಾ ಚುನಾವಣಾಧಿಕಾರಿ ಸೂರ್ಯ ಪಾಲ್ ಗಂಗ್ವಾರ್ ಅವರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಲಾಯಿತು. ಈ ವೇಳೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಜತೆಗಿದ್ದರು.
ನಾಮಪತ್ರ ಸಲ್ಲಿಸುವ ಮೊದಲು ದಕ್ಷಿಣ ಮುಖಿ ಹನುಮಾನ್ ದೇವಾಲಯ ಮತ್ತು ಹನುಮಾನ್ ಸೇತು ದೇವಾಲಯದಲ್ಲಿ ಅವರು ಪ್ರಾರ್ಥನೆ ಸಲ್ಲಿಸಿದರು.
ಈ ಹಿಂದೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಐದು ಬಾರಿ ಲಖನೌ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.
2019ರ ಲೋಕಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಪೂನಂ ಸಿನ್ಹಾ ಅವರನ್ನು ಸಿಂಗ್ ಸೋಲಿಸಿದ್ದರು. ಈ ಬಾರಿ ಸಮಾಜವಾದಿ ಪಕ್ಷದ ರವಿದಾಸ್ ಮೆಹ್ಹೋತ್ರಾ ಅವರು ಪೈಪೋಟಿ ನೀಡಲಿದ್ದಾರೆ.
ಲೋಕಸಭಾ ಚುನಾವಣೆಯ ಐದನೇ ಹಂತದಲ್ಲಿ ಮೇ 20ರಂದು ಲಖನೌದಲ್ಲಿ ಮತದಾನ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.