ADVERTISEMENT

LS Polls: ಮಹಾರಾಷ್ಟ್ರದಲ್ಲಿ ಶಿವಸೇನೆ 21, ಕಾಂಗ್ರೆಸ್17, ಎನ್‌ಸಿಪಿಗೆ 10 ಸ್ಥಾನ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2024, 11:01 IST
Last Updated 9 ಏಪ್ರಿಲ್ 2024, 11:01 IST
ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಮತ್ತು ಎನ್‌ಸಿಪಿ ನಾಯಕ ಶರದ್ ಪವಾರ್
ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಮತ್ತು ಎನ್‌ಸಿಪಿ ನಾಯಕ ಶರದ್ ಪವಾರ್   

ಮುಂಬೈ: ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ ಸೀಟು ಹಂಚಿಕೆಯನ್ನು ಪೂರ್ಣಗೊಳಿಸಿದ್ದು ಶಿವಸೇನೆ (ಯುಬಿಟಿ) 21, ಕಾಂಗ್ರೆಸ್ 17, ಎನ್‌ಸಿಪಿ (ಶರದ್‌) 10 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. 

ಈ ಸ್ಥಾನ ಹಂಚಿಕೆ ಬಗ್ಗೆ ಮಿತ್ರಪಕ್ಷಗಳ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಹಾಗೂ ರಾಜ್ಯದ 48 ಲೋಕಸಭೆಗಳಿಗೆ ಅಭ್ಯರ್ಥಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಎನ್‌ಸಿಪಿ (ಶರದ್‌) ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.

ಬಿಜೆಪಿಯನ್ನು ಸೋಲಿಸುವುದು ನಮ್ಮ ಉದ್ದೇಶ ಎಂದು ಉದ್ಧವ್ ಠಾಕ್ರೆ ಹೇಳಿದರು. ಕೇಂದ್ರದಲ್ಲಿ ಕಾಂಗ್ರೆಸ್‌ ಪಕ್ಷವನ್ನು ನಾವು ಅಧಿಕಾರಕ್ಕೆ ತರಬೇಕು ಎಂದು ಕಾಂಗ್ರೆಸ್‌ ನಾಯಕ ನಾನಾ ಪಟೋಲೆ ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.