ನವದೆಹಲಿ: ಟಿಎಂಸಿ ಸಂಸದೆ ಮೊಹುವಾ ಮೊಯಿತ್ರಾ ಅವರು ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಹಣ ಪಡೆದಿದ್ದಾರೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ನೀಡಿರುವ ದೂರನ್ನು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ನೀತಿ–ನಿಯಮಗಳ ಸಮಿತಿಗೆ ಒಪ್ಪಿಸಿದ್ದಾರೆ.
ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಉದ್ಯಮಿಯೊಬ್ಬರಿಂದ ಹಣ ಪಡೆದಿದ್ದಾರೆ ಎಂದು ದುಬೆ ಆರೋಪಿಸಿದ್ದರು ಮತ್ತು ಈ ಸಂಬಂಧ ತನಿಖೆಗೆ ಸಮಿತಿ ರಚಿಸಬೇಕು ಎಂದು ಸ್ಪೀಕರ್‌ಗೆ ಮನವಿ ಸಲ್ಲಿಸಿದ್ದರು.
ಬಿಜೆಪಿ ಸಂಸದ ವಿನೋದ್ ಕುಮಾರ್ ಸೋಂಕರ್ ನೀತಿ ನಿಯಮಗಳ ಸಮಿತಿಯ ಮುಖ್ಯಸ್ಥರಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.