ಪಿಲಿಭಿತ್: ಹಸುವಿನ ದೊಡ್ಡಿಯಲ್ಲಿ ಮಲಗುವುದರಿಂದ, ಅದನ್ನು ಸ್ವಚ್ಛಗೊಳಿಸುವುದರಿಂದ ಕ್ಯಾನ್ಸರ್ ಗುಣಪಡಿಸಬಹುದು ಎಂದು ಉತ್ತರ ಪ್ರದೇಶದ ಸಚಿವ ಸಂಜಯ್ ಸಿಂಗ್ ಗಂಗ್ವಾರ್ ಭಾನುವಾರ ಹೇಳಿದ್ದಾರೆ.
ನೌಗಾವ ಪಕಾಡಿಯಾದಲ್ಲಿ ₹55 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಕನ್ಹಾ ಗೋಶಾಲೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡುತ್ತಾ ಸಚಿವರು ಈ ಹೇಳಿಕೆ ನೀಡಿದ್ದಾರೆ.
ಹಸುಗಳ ಸೇವೆ ಮಾಡುವುದರಿಂದ ರಕ್ತದೊತ್ತಡವನ್ನೂ ಕಡಿಮೆ ಮಾಡಬಹುದು ಎಂದು ಅವರು ಹೇಳಿದ್ದಾರೆ.
'ಅಧಿಕ ರಕ್ತದೊತ್ತಡದ ರೋಗಿಗಳಿದ್ದರೆ ಕೇಳಿ. ಇಲ್ಲಿ ಹಸುಗಳಿವೆ. ನೀವು ಪ್ರತಿನಿತ್ಯ ಬೆಳಿಗ್ಗೆ ಮತ್ತು ಸಂಜೆ ಹಸುಗಳ ಸೇವೆ ಮಾಡುವುದರಿಂದ ಔಷಧವನ್ನು ಅರ್ಧ ಪ್ರಮಾಣಕ್ಕೆ ಇಳಿಸಬಹುದು. ಒಬ್ಬ ವ್ಯಕ್ತಿ ರಕ್ತದೊತ್ತಡಕ್ಕೆ ಔಷಧಿಯಾಗಿ 20 ಮಿ.ಗ್ರಾಂ ಡೋಸ್ ತೆಗೆದುಕೊಳ್ಳುತ್ತಿದ್ದರೆ. ಹಸುಗಳ ಸೇವೆಯಿಂದ 10 ದಿನಗಳಲ್ಲಿ 10 ಮಿ.ಗ್ರಾಂಗೆ ಔಷಧಿ ಪ್ರಮಾಣ ಇಳಿಯುತ್ತದೆ‘ ಎಂದು ಹೇಳಿದ್ದಾರೆ.
ಗೋಶಾಲೆಗಳೊಂದಿಗೆ ಜನರನ್ನು ಸಂಪರ್ಕಿಸುವುದು ನಮ್ಮ ಪ್ರಯತ್ನ. ಜನ ತಮ್ಮ ವಿವಾಹ ವಾರ್ಷಿಕೋತ್ಸವ ಹಾಗೂ ಮಕ್ಕಳ ಜನ್ಮದಿನವನ್ನು ಗೋಶಾಲೆಯಲ್ಲಿ ಆಚರಿಸಬೇಕು ಹಾಗೂ ಗೋಶಾಲೆಗೆ ಮೇವನ್ನು ದಾನ ಮಾಡಬೇಕು ಎಂದು ಸಚಿವರು ಮನವಿ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.