ADVERTISEMENT

ಹಿಂದಿ ಮಾಸಾಚರಣೆಗೆ ಸ್ಟಾಲಿನ್ ಖಂಡನೆ: ಸ್ಥಳೀಯ ಭಾಷೆಯನ್ನು ಗೌರವಿಸಲು ಮೋದಿಗೆ ಮನವಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ಅಕ್ಟೋಬರ್ 2024, 12:28 IST
Last Updated 18 ಅಕ್ಟೋಬರ್ 2024, 12:28 IST
<div class="paragraphs"><p>ಎಂ.ಕೆ. ಸ್ಟಾಲಿನ್</p></div>

ಎಂ.ಕೆ. ಸ್ಟಾಲಿನ್

   

ಚೆನ್ನೈ: ಚೆನ್ನೈ ದೂರದರ್ಶನದ ಸುವರ್ಣ ಮಹೋತ್ಸವದ ಜತೆಗೆ ‘ಹಿಂದಿ ಮಾಸಾಚರಣೆ’ಯ ಸಮಾರೋಪ ಸಮಾರಂಭವನ್ನು ಆಯೋಜಿಸಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಈ ಕುರಿತು ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಬಹುಭಾಷಾ ರಾಷ್ಟ್ರವಾದ ಭಾರತದಲ್ಲಿ ಹಿಂದಿಯೇತರ ರಾಜ್ಯಗಳಲ್ಲಿ ಹಿಂದಿ ಮಾಸವನ್ನು ಆಚರಿಸುವ ಮೂಲಕ ಇತರ ಭಾಷೆಗಳನ್ನು ಕೀಳಾಗಿ ಕಾಣುವ ಪ್ರಯತ್ನ ಇದಾಗಿದೆ’ ಎಂದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ADVERTISEMENT

‘ಸಂವಿಧಾನವು ಯಾವುದೇ ಭಾಷೆಗೆ ರಾಷ್ಟ್ರೀಯ ಭಾಷಾ ಸ್ಥಾನಮಾನವನ್ನು ನೀಡಿಲ್ಲ. ಆದ್ದರಿಂದ ಹಿಂದಿಯೇತರ ರಾಜ್ಯಗಳಲ್ಲಿ ‘ಹಿಂದಿ ಮಾಸಾಚರಣೆ’ಯಂತಹ ಕಾರ್ಯಕ್ರಮಗಳನ್ನು ನಡೆಸುವುದನ್ನು ತಪ್ಪಿಸಬೇಕು. ಬದಲಾಗಿ ಆಯಾ ರಾಜ್ಯಗಳ ಸ್ಥಳೀಯ ಭಾಷೆಗಳನ್ನು ಆಚರಿಸಲು ಪ್ರೋತ್ಸಾಹ ನೀಡಬೇಕು’ ಎಂದು ಮೋದಿಗೆ ಬರೆದ ಪತ್ರದಲ್ಲಿ ಸ್ಟಾಲಿನ್ ಉಲ್ಲೇಖಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.