ADVERTISEMENT

ಮಧ್ಯಪ್ರದೇಶ | ಗುಂಪು ಘರ್ಷಣೆ: ಪೊಲೀಸರು ಸೇರಿ ಐವರಿಗೆ ಗಾಯ; BJP ಶಾಸಕ ವಶಕ್ಕೆ

ಪಿಟಿಐ
Published 20 ನವೆಂಬರ್ 2024, 4:01 IST
Last Updated 20 ನವೆಂಬರ್ 2024, 4:01 IST
<div class="paragraphs"><p>ಮಧ್ಯಪ್ರದೇಶದ ಮೌಗಂಜ್ ಜಿಲ್ಲೆಯ ದೇವ್ರಾ ಗ್ರಾಮದಲ್ಲಿ&nbsp;ಬಿಗಿ ಪೊಲೀಸ್ ಬಂದೋಬಸ್ತ್</p></div>

ಮಧ್ಯಪ್ರದೇಶದ ಮೌಗಂಜ್ ಜಿಲ್ಲೆಯ ದೇವ್ರಾ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

   

-ಪಿಟಿಐ ಚಿತ್ರ

ರೇವಾ: ಮಧ್ಯಪ್ರದೇಶದ ಮೌಗಂಜ್ ಜಿಲ್ಲೆಯ ದೇವ್ರಾ ಗ್ರಾಮದಲ್ಲಿ ದೇವಸ್ಥಾನದ ಜಾಗವನ್ನು ಅತಿಕ್ರಮಿಸಿ ನಿರ್ಮಿಸಿದ ಗೋಡೆಯನ್ನು ತೆರವುಗೊಳಿಸುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿ ಕಲ್ಲು ತೂರಾಟ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಘಟನೆಯಲ್ಲಿ ಇಬ್ಬರು ಪೊಲೀಸರು ಸೇರಿದಂತೆ ಐವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೇವಸ್ಥಾನದ ಒತ್ತುವರಿ ಜಾಗವನ್ನು ತೆರವುಗೊಳಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಕಳೆದ ಮೂರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರು. ಹಾಗಾಗಿ ಕ್ರಮ ಕೈಗೊಳ್ಳುವಂತೆ ಶಾಸಕರು ಸ್ಥಳೀಯ ಆಡಳಿತಕ್ಕೆ ಸೂಚಿಸಿದ್ದರು.

ಸ್ಥಳೀಯ ಅಧಿಕಾರಿಗಳು ಕ್ರಮಕೈಗೊಳ್ಳದಿದ್ದಾಗ ಬಿಜೆಪಿ ಶಾಸಕ ಪ್ರದೀಪ್ ಪಟೇಲ್ ಅವರು ತಮ್ಮ ಬೆಂಬಲಿಗರೊಂದಿಗೆ ದೇವಸ್ಥಾನದ ಬಳಿ ಬಂದಿದ್ದರು. ಇದೇ ಸಂದರ್ಭದಲ್ಲಿ ಶಾಸಕರು ಬೆಂಬಲಿಗರು ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ ನಡೆದಿದೆ. ಕೆಲವು ಕಿಡಿಗೇಡಿಗಳು ಗುಡಿಸಲಿಗೆ ಬೆಂಕಿ ಹಚ್ಚಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೇವ್ರಾ ಗ್ರಾಮದಲ್ಲಿ ಪರಿಸ್ಥಿತಿ ನಿಯಂತ್ರಿಸಲು ಹಾಗೂ ಶಾಂತಿ ಕಾಪಾಡಲು ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಮೌಗಂಜ್ ಎಸ್‌ಪಿ ರಸ್ನಾ ಠಾಕೂರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.