ಮೊರೆನಾ: ಮಧ್ಯಪ್ರದೇಶದ ಮೊರೆನಾ ಜಿಲ್ಲೆಯ ದಿಮಾನಿ ವಿಧಾನಸಭೆ ಕ್ಷೇತ್ರದ ಮಿರ್ಘಾನ್ ಗ್ರಾಮದ ಮತಗಟ್ಟೆ 147–148ರಲ್ಲಿ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದೆ.
ಘಟನೆಯಲ್ಲಿ ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಎಎನ್‌ಐ ಟ್ವೀಟ್ ಮಾಡಿದೆ.
230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆಗೆ ಇಂದು ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ.
ಬೆಳಿಗ್ಗೆ 7ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 5ರ ವರೆಗೆ ನಡೆಯಲಿದೆ. ಬೆಳಿಗ್ಗೆ 9ರ ಹೊತ್ತಿಗೆ ಶೇ 11ರಷ್ಟು ಮತದಾನವಾಗಿದೆ. ಡಿಸೆಂಬರ್ 3ರಂದು ಮತ ಎಣಿಕೆ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.