ಭೋಪಾಲ್: ಮಧ್ಯಪ್ರದೇಶ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ಸೋಮವಾರ ಸಭೆ ನಡೆಯಲಿದೆ. ಇದರೊಂದಿಗೆ ನೂತನ ಮುಖ್ಯಮಂತ್ರಿ ಯಾರು ಆಗಲಿದ್ದಾರೆ ಎಂಬ ಕುತೂಹಲಕ್ಕೆ ತೆರೆಬೀಳುವ ಸಾಧ್ಯತೆಯಿದೆ.
ಸೋಮವಾರ ಮಧ್ಯಾಹ್ನ ಭೋಜನಕೂಟದ ಬಳಿಕ ಸಂಜೆ 4ರ ವೇಳೆಗೆ ಸಭೆ ಆರಂಭವಾಗಲಿದೆ. ರಾತ್ರಿ 7 ಗಂಟೆಯೊಳಗೆ ಹೊಸ ಸಿಎಂ ಆಯ್ಕೆ ಘೋಷಣೆಯಾಗಲಿದೆ ಎಂದು ಶಾಸಕರೊಬ್ಬರು ತಿಳಿಸಿದ್ದಾರೆ.
ಬಿಜೆಪಿ ಕೇಂದ್ರ ವೀಕ್ಷಕರಾದ, ಹರಿಯಾಣ ಮುಖ್ಯಮಂತ್ರಿ ಮನೋಹರಲಾಲ್ ಖಟ್ಟರ್, ಬಿಜೆಪಿ ಒಬಿಸಿ ಮೋರ್ಚಾ ಅಧ್ಯಕ್ಷ ಕೆ.ಲಕ್ಷ್ಮಣ್ ಮತ್ತು ಕಾರ್ಯದರ್ಶಿ ಆಶಾ ಲಾಕ್ರ ಸಮ್ಮುಖದಲ್ಲಿ ಸಭೆ ನಡೆಯಲಿದೆ.
230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆಯಲ್ಲಿ 163 ಸ್ಥಾನಗಳಲ್ಲಿ ಗೆದ್ದ ಬಿಜೆಪಿ ಮತ್ತೆ ಅಧಿಕಾರ ಹಿಡಿದಿದೆ. ನವೆಂಬರ್ 17ರಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 66 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ.
ಮಧ್ಯಪ್ರದೇಶದಲ್ಲಿ ಬಿಜೆಪಿಯು ಸಿಎಂ ಅಭ್ಯರ್ಥಿಯನ್ನು ಘೋಷಿಸದೆಯೇ ಚುನಾವಣೆಯನ್ನು ಎದುರಿಸಿತ್ತಲ್ಲದೆ ಅಭೂತಪೂರ್ವ ಗೆಲುವು ಸಾಧಿಸಿದೆ.
ಶಿವರಾಜ್ ಸಿಂಗ್ ಚೌಹಾಣ್, ಪ್ರಹ್ಲಾದ್ ಪಟೇಲ್, ನರೇಂದ್ರ ತೋಮರ್, ಕೈಲಾಶ್ ವಿಜಯವರ್ಗಿಯ, ವಿ.ಡಿ. ಶರ್ಮಾ, ಜೋತಿರಾದಿತ್ಯ ಸಿಂಧಿಯಾ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.