ADVERTISEMENT

ವಿಧಾನಸಭಾ ಚುನಾವಣೆ 2023: ಮಧ್ಯಪ್ರದೇಶ, ಛತ್ತೀಸಗಢದಲ್ಲಿ ಮತದಾನ ಆರಂಭ

ಐದು ರಾಜ್ಯಗಳ ಪೈಕಿ ಅತ್ಯಂತ ‘ಹೈವೊಲ್ಟೇಜ್’ ಚುನಾವಣೆ ಎಂದೇ ಪರಿಗಣಿಸಲಾಗಿರುವ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಗೆ ಮತದಾನ ಆರಂಭವಾಗಿದೆ.

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 17 ನವೆಂಬರ್ 2023, 2:09 IST
Last Updated 17 ನವೆಂಬರ್ 2023, 2:09 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ನವದೆಹಲಿ: ಮಧ್ಯಪ್ರದೇಶದ ಎಲ್ಲಾ 230 ವಿಧಾನಸಭಾ ಸ್ಥಾನಗಳಿಗೆ ಮತ್ತು ಛತ್ತೀಸಗಢದ 70 ಸ್ಥಾನಗಳಿಗೆ 2ನೇ ಹಂತದ ಚುನಾವಣೆಗೆ ಇಂದು (ಶುಕ್ರವಾರ) ಮತದಾನ ನಡೆಯಲಿದೆ. ಹಿಂದಿ ಹೃದಯಭಾಗದ ಈ ಎರಡೂ ರಾಜ್ಯಗಳಲ್ಲಿ, ಬಹುತೇಕ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ ಹಣಾಹಣಿ ಇದೆ.

ಮತದಾನ ಆರಂಭ:

ADVERTISEMENT

ಮಧ್ಯಪ್ರದೇಶದ ಎಲ್ಲಾ 230 ವಿಧಾನಸಭಾ ಸ್ಥಾನಗಳಿಗೆ ಇಂದು ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ. ಬೆಳಿಗ್ಗೆ 7 ರಿಂದ ಸಂಜೆ 6 ರವರೆಗೆ ಮತದಾನ ನಡೆಯಲಿದೆ. ಆದರೆ, ಬಾಲಾಘಾಟ್ ಜಿಲ್ಲೆಯ ಬೈಹಾರ್, ಲಾಂಜಿ ಮತ್ತು ಪಾರ್ಸ್ವರ ವಿಧಾನಸಭಾ ಕ್ಷೇತ್ರಗಳು ಮತ್ತು ಮಂಡ್ಲಾ ಮತ್ತು ದಿಂಡೋರಿ ಜಿಲ್ಲೆಗಳ ಕೆಲ ಬೂತ್‌ಗಳಲ್ಲಿ ಮಧ್ಯಾಹ್ನ 3 ಗಂಟೆವರೆಗೆ ಮತದಾನ ನಡೆಯಲಿದೆ.

ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ಸೇರಿದಂತೆ ಉಭಯ ಪಕ್ಷಗಳ ಹಲವು ಪ್ರಮುಖ ನಾಯಕರು ಕಣದಲ್ಲಿದ್ದಾರೆ.

ಸುಮಾರು 5.59 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ. ಇದರಲ್ಲಿ 2.87 ಕೋಟಿ ಪುರುಷ ಮತ್ತು 2.71 ಕೋಟಿ ಮಹಿಳಾ ಮತದಾರರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2ನೇ ಹಂತದ ಮತದಾನ:

ಛತ್ತೀಸಗಢ ವಿಧಾನಸಭೆ ಚುನಾವಣೆಗೆ ಎರಡನೇ ಹಂತದಲ್ಲಿ 70 ಸ್ಥಾನಗಳಿಗೆ ಇಂದು ಮತದಾನ ನಡೆಯಲಿದೆ. ರಾಜ್ಯದ ಒಟ್ಟು 90 ಸ್ಥಾನಗಳ ಪೈಕಿ 20 ಸ್ಥಾನಗಳಿಗೆ ನ.7 ರಂದು ಮತದಾನ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.