ADVERTISEMENT

Madhya Pradesh Election Results: ನೂತನ CM ಕಮಲ್ ನಾಥ್, ಪೋಸ್ಟರ್‌ಗಳ ಅಳವಡಿಕೆ

ಫಲಿತಾಂಶಕ್ಕೆ ಮುನ್ನವೇ ನೂತನ ಸಿಎಂ ಕಮಲ್‌ ನಾಥ್‌ ಪೋಸ್ಟರ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ಡಿಸೆಂಬರ್ 2023, 9:33 IST
Last Updated 2 ಡಿಸೆಂಬರ್ 2023, 9:33 IST
   

ನವದೆಹಲಿ: ಕಾಂಗ್ರೆಸ್‌ ನಾಯಕ ಕಮಲ್ ನಾಥ್ ಅವರು ಮಧ್ಯಪ್ರದೇಶದ ಮುಂದಿನ ಮುಖ್ಯಮಂತ್ರಿ ಎಂದು ಬಿಂಬಿಸಲಾದ ಪೋಸ್ಟರ್‌ಗಳನ್ನು ಭೋಪಾಲ್‌ನ ಪಕ್ಷದ ಪ್ರಧಾನ ಕಚೇರಿಯ ಹೊರಗೆ ಹಾಕಲಾಗಿದೆ.

ಮಧ್ಯಪ್ರದೇಶ ವಿಧಾನಸಭೆಗೆ ಒಂದೇ ಹಂತದಲ್ಲಿ ನವೆಂಬರ್‌ 17ರಂದು ಮತದಾನ ನಡೆದಿತ್ತು.

230 ಕ್ಷೇತ್ರಗಳ ಹೊಂದಿರುವ ಮಧ್ಯಪ್ರದೇಶದಲ್ಲಿ ಸರ್ಕಾರ ರಚಿಸಲು ಬಹುಮತಕ್ಕೆ ಬೇಕಿರುವ ಸಂಖ್ಯೆ 116. ಹೆಚ್ಚಿನ ಮತದಾನೋತ್ತರ ಸಮೀಕ್ಷೆಗಳು ಆಡಳಿತಾರೂಢ ಬಿಜೆಪಿಗೆ ಬಹುಮತ ಸಿಗುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಿವೆ.

ADVERTISEMENT

ಡಿ.3ರಂದು (ಭಾನುವಾರ) ಮತ ಎಣಿಕೆ ನಡೆಯಲಿದ್ದು, ಎಲ್ಲರ ಚಿತ್ತ ಮತಗಟ್ಟೆಯತ್ತ ನೆಟ್ಟಿದೆ. ಮಧ್ಯಪ್ರದೇಶದಲ್ಲಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ (ಬಿಜೆಪಿ) ಮತ್ತು ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ (ಕಾಂಗ್ರೆಸ್) ಮುಂಚೂಣಿಯಲ್ಲಿದ್ದು, ಯಾರು ಅಧಿಕಾರದ ಗದ್ದುಗೆ ಏರಲಿದ್ದಾರೆ ಎಂಬುದು ಕಾದು ನೋಡಬೇಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.