ಮಧ್ಯಾಹ್ನ 1 ಗಂಟೆಯ ಟ್ರೆಂಡ್ ಪ್ರಕಾರ
230 ಕ್ಷೇತ್ರಗಳ ಪೈಕಿ ಬಿಜೆಪಿ 159ರಲ್ಲಿ, ಕಾಂಗ್ರೆಸ್ 68ರಲ್ಲಿ, ಇತರರು 4 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಹಿನ್ನಡೆ ಅನುಭವಿಸಿದ ಬಿಜೆಪಿಯ ಪ್ರಮುಖ ನಾಯಕರು
ಕೇಂದ್ರ ಸಚಿವ ಫಗ್ಗನ್ ಸಿಂಗ್ ಕುಲಸ್ತೆ
ಗೃಹ ಸಚಿವ ನರೋತ್ತಮ್ ಮಿಶ್ರಾ (ದತಿಯಾ ಕ್ಷೇತ್ರ)
ಅರವಿಂದ ಭಡೋರಿಯಾ (ಅತೆರ್ ಕ್ಷೇತ್ರ)
ಮೋಹನ್ ಯಾದವ್ (ಉಜ್ಜಯಿನಿ ದಕ್ಷಿಣ)
ವಿಶ್ವಾಸ್ ಸಾರಂಗ್ (ನರೇಲಾ)
ಮಹೇಂದ್ರ ಸಿಂಗ್ ಸಿಸೋಡಿಯಾ (ಬಾಮೋರಿ)
ರಾಜ್ಯವರ್ಧನ್ ಸಿಂಗ್ ದತ್ತಿಗಾಂವ್ (ಬದ್ನಾವರ್ ಕ್ಷೇತ್ರ)
ಮುನ್ನಡೆ ಸಾಧಿಸಿದ ಪ್ರಮುಖ ನಾಯಕರು
ಶಿವರಾಜ್ ಸಿಂಗ್ ಚೌಹಾಣ್
ಕೇಂದ್ರ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್,
ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್
ಮುಖ್ಯಮಂತ್ರಿ ಚೌಹಾಣ್ ನಿವಾಸದಲ್ಲಿ ಕೆಲಸ ಮಾಡುವ ರಾಧಾ ಬಾಯಿ ಎಂಬುವವರು ಚೌಹಾಣ್ ಅವರಿಗೆ ಹೂ ನೀಡುವ ಮೂಲಕ ಶುಭಾಶಯ ತಿಳಿಸಿದ್ದಾರೆ.
12 ಗಂಟೆಯ ಟ್ರೆಂಡ್ ಪ್ರಕಾರ
ಬಿಜೆಪಿ 155, ಕಾಂಗ್ರೆಸ್ 70 ಮತ್ತು ಇತರರು 5 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಭರವಸೆ ಕಳೆದುಕೊಳ್ಳದ ಕಾಂಗ್ರೆಸ್ ಕಾರ್ಯಕರ್ತರು
ಚುನಾವಣೆಯಲ್ಲಿ ಬಿಜೆಪಿ ಪಕ್ಷ ಭಾರಿ ಮುನ್ನಡೆಯಲ್ಲಿ ಸಾಗುತ್ತಿದ್ದರು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ನಿರಾಶರಾಗದೆ ಪಕ್ಷದ ಗೆಲುವಿಗೆ ಹಂಬಲಿಸುತ್ತಿದ್ದಾರೆ.
ಗೃಹ ಸಚಿವ ನರೋತ್ತಮ್ ಮಿಶ್ರಾಗೆ ಹಿನ್ನಡೆ
ಎರಡನೇ ಸುತ್ತಿನ ಮತ ಎಣಿಕೆಯಲ್ಲಿ ಕೇಂದ್ರ ಸಚಿವ ಫಗ್ಗನ್ ಸಿಂಗ್ ಕುಲಸ್ತೆ ಹಿನ್ನಡೆ ಅನುಭವಿಸಿದ್ದಾರೆ. ಕೇಂದ್ರ ಸಚಿವರಾದ ಪ್ರಹ್ಲಾದ್ ಸಿಂಗ್ ಪಟೇಲ್, ನರೇಂದ್ರ ಸಿಂಗ್ ತೋಮರ್ ಮುನ್ನಡೆ ಸಾಧಿಸಿದ್ದಾರೆ. ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು ಕಾಂಗ್ರೆಸ್‌ನ ರಾಜೇಂದ್ರ ಭಾರ್ತಿ ವಿರುದ್ಧ ಹಿನ್ನಡೆ ಸಾಧಿಸಿದ್ದಾರೆ.
ಪಕ್ಷದ ಕಚೇರಿಗೆ ಅಶ್ವಿನ್ ವೈಷ್ಣವ್ ಭೇಟಿ
ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಮುನ್ನಡೆ ಸಾಧಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಭೋಪಾಲ್‌ನ ಪಕ್ಷದ ಕಚೇರಿಗೆ ಭೇಟಿ ನೀಡಿದ್ದಾರೆ. ಕಾರ್ಯಕರ್ತರು, ಮುಖಂಡರನ್ನು ಪರಸ್ಪರ ಆಲಂಗಿಸುವ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ.
ಸಾಂಗವಾಗಿ ನಡೆದ ಮತ ಎಣಿಕೆ
‘ನಿಗದಿತ ಸಮಯಕ್ಕೆ ಮತ ಎಣಿಕೆ ಆರಂಭಗೊಂಡಿದ್ದು, ಪ್ರತಿ ಸ್ಥಳದಲ್ಲೂ ಮತ ಎಣಿಕೆ ಶಾಂತಿಯುತವಾಗಿ ನಡೆಯುತ್ತಿದೆ. ಕೆಲವೊಂದು ಕಡೆ ತಾಂತ್ರಿಕ ತೊಂದರೆ ಕಾಣಿಸಿಕೊಂಡಿದ್ದು, ತಕ್ಷಣ ಸರಿಪಡಿಸಿದ್ದೇವೆ’ ಎಂದು ಮಧ್ಯಪ್ರದೇಶದ ಮುಖ್ಯ ಚುನಾವಣಾ ಅಧಿಕಾರಿ ಅನುಪಮ್ ರಾಜನ್ ಹೇಳಿದ್ದಾರೆ.
ಸಸಿ ನೆಟ್ಟು ಗೆಲುವು ಸಂಭ್ರವಿಸಿದ ಚೌಹಾಣ್
ಪಕ್ಷ ಮುನ್ನಡೆ ಸಾಧಿಸಿರುವುದನ್ನು ವಿಭಿನ್ನವಾಗಿ ಸಂಭ್ರಮಿಸಿದ ಶಿವರಾಜ್ ಸಿಂಗ್ ಚೌಹಾಣ್, ಸಸಿ ನೆಡುವ ಮೂಲಕ ಬಹುಮತದ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ಮೋದಿ ಜನರ ಹೃದಯ ಗೆದ್ದಿದ್ದಾರೆ: ಚೌಹಾಣ್
ಮಧ್ಯಪ್ರದೇಶದಲ್ಲಿ ಬಿಜೆಪಿ ಭಾರಿ ಮುನ್ನಡೆ ಸಾಧಿಸಿದ್ದು, ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಶಿವರಾಜ್ ಸಿಂಗ್ ಚೌಹಾಣ್, ‘ಹಲವು ರ್‍ಯಾಲಿಗಳನ್ನು ಕೈಗೊಳ್ಳುವ ಮೂಲಕ ಮೋದಿ ಅವರು ಜನರ ಹೃದಯವನ್ನು ಮುಟ್ಟಿದ್ದಾರೆ. ಕೇಂದ್ರ ಯೋಜನೆಗಳನ್ನು ರಾಜ್ಯದ ಜನರಿಗೆ ತಲುಪಿಸಲು ಡಬಲ್ ಇಂಜಿನ್ ಸರ್ಕಾರ ಯಶಸ್ವಿಯಾಗಿದೆ. ಬಿಜೆಪಿಗೆ ಬಹುಮತ ಸಿಗಲಿದೆ ಎಂದು ನಾನು ಹಿಂದೆಯೇ ತಿಳಿಸಿದ್ದೇನೆ’ ಎಂದರು.
ಎರಡನೇ ಸುತ್ತಿನಲ್ಲಿ ಚೌಹಾಣ್, ಕಮಲ್ ನಾಥ್‌ಗೆ ಮುನ್ನಡೆ
ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಎರಡನೇ ಸುತ್ತಿನ ಮತ ಎಣಿಕೆಯ ನಂತರ ಕಾಂಗ್ರೆಸ್‌ನ ವಿಕ್ರಮ್ ಶರ್ಮಾ ವಿರುದ್ಧ 13,339 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಮುಖಂಡ ಕಮಲ್ ನಾಥ್ ಅವರು ತಮ್ಮ ಎದುರಾಳಿ ಬಿಜೆಪಿಯ ವಿವೇಕ್ ಸಾಹು ವಿರುದ್ಧ 5,978 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿಯ ಕೈಲಾಶ್ ವಿಜಯವರ್ಗಿಯ ಅವರು ಕಾಂಗ್ರೆಸ್‌ನ ಸಂಜಯ್ ಶುಕ್ಲಾ ಅವರಿಗಿಂತ 4,268 ಮತಗಳ ಅಂತರ ಸಾಧಿಸಿದ್ದಾರೆ.
ಭೋಪಾಲ್ ಅನಿಲ ದುರಂತ: ಬಿಎಂಎಚ್ಆರ್‌ಸಿಗೆ ಭೇಟಿ ನೀಡಿದ ಚೌಹಾಣ್
ಬಿಎಂಎಚ್ಆರ್‌ಸಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಭೋಪಾಲ್ ಅನಿಲ ದುರಂತದಲ್ಲಿ ಮೃತಪಟ್ಟವರಿಗೆ ಶ್ರದ್ದಾಂಜಲಿ ಸಲ್ಲಿಸಿದ್ದಾರೆ.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಲಾಗುವುದು’ ಎಂದರು
ಚುನಾವಣೆಯಲ್ಲಿ ಬಿಜೆಪಿ ಭಾರಿ ಮುನ್ನಡೆಗಳಿಸಿದ್ದು, ಮತ್ತೆ ಆಡಳಿತ ಚುಕ್ಕಾಣಿ ಹಿಡಿಯುವ ಎಲ್ಲ ಸಾಧ್ಯತೆಗಳಿವೆ.
ಸಿಹಿ ಹಂಚಿ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು
ಮಧ್ಯಪ್ರದೇಶದಲ್ಲಿ ಬಿಜೆಪಿ ಭಾರೀ ಮುನ್ನಡೆ ಸಾಧಿಸಿದ್ದು, ಭೋಪಾಲ್‌ನ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಹಿಸಿದ್ದಾರೆ.
144 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ
ಈಗಿನ ಟ್ರೆಂಡ್ ಪ್ರಕಾರ ಬಿಜೆಪಿ 144 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದರೆ, ಕಾಂಗ್ರೆಸ್ 83 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
124 ಸ್ಥಾನಗಳಲ್ಲಿ ಬಿಜೆಪಿಗೆ ಮುನ್ನಡೆ
ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದ್ದು, 120ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.
ಈಗಿನ ಟ್ರೆಂಡ್ ಪ್ರಕಾರ ಬಿಜೆಪಿ 124 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 95 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ.
ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಕಾಂಗ್ರೆಸ್ ಮುಖಂಡ ಕಮಲ್ ನಾಥ್ ಮುನ್ನಡೆ ಸಾಧಿಸಿದ್ದಾರೆ.
ಮತ ಎಣಿಕೆಗೆ ಕ್ಷಣಗಣನೆ, ಬಿಗಿ ಭದ್ರತೆ
ಭೋಪಾಲ್: ಮಧ್ಯಪ್ರದೇಶದ 230 ಸ್ಥಾನಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಲಿದೆ. ಮತ ಎಣಿಕೆ ಕೇಂದ್ರಗಳ ಸುತ್ತ ಮುತ್ತ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.
230 ಸದಸ್ಯಬಲದ ವಿಧಾನಸಭೆ ಚುನಾವಣೆಗೆ 2,533 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಕಾಂಗ್ರೆಸ್ ಮುಖಂಡ ಕಮಲ ನಾಥ್ ಸೇರಿದಂತೆ ಹಲವು ಘಟಾನುಘಟಿ ನಾಯಕರ ಭವಿಷ್ಯ ಇಂದು ನಿರ್ಧರವಾಗಲಿದೆ.
ಇಂದು ಬೆಳಿಗ್ಗೆ 8 ಗಂಟೆಯಿಂದಲೇ ಮತ ಎಣಿಕೆ ಆರಂಭವಾಗಲಿದ್ದು, ಸಂಜೆಯ ವೇಳೆಗೆ ಫಲಿತಾಂಶ ಹೊರಬೀಳಲಿದೆ. ಯಾರು ಯಾವ ಕ್ಷೇತ್ರದಲ್ಲಿ ಜಯಭೇರಿ ಬಾರಿಸಲಿದ್ದಾರೆ? ಯಾವ ಪಕ್ಷ ಆಡಳಿತ ಚುಕ್ಕಾಣಿ ಹಿಡಿಯಲಿದೆ ಎಂಬ ಕುತೂಹಲಕ್ಕೆ ಇಂದು ತೆರೆ ಬೀಳಲಿದೆ.
ಚಿಂದ್ವಾರ ಮತ್ತು ಭೋಪಾಲ್‌ನ ಮತ ಎಣಿಕೆ ಕೇಂದ್ರದಲ್ಲಿ ಎಲ್ಲ ರೀತಿಯ ಸಿದ್ಧತೆಗಳು ನಡೆಯುತ್ತಿವೆ. ವಿದ್ಯುನ್ಮಾನ ಮತಯಂತ್ರಗಳನ್ನು (ಇವಿಎಂ) ಸುಸಜ್ಜಿತ ಸ್ಟ್ರಾಂಗ್ ರೂಮ್‌ಗಳಿಂದ ಹೊರತೆಗೆದು ಮತ ಎಣಿಕೆ ಕೇಂದ್ರಗಳಲ್ಲಿ ಇರಿಸಲಾಗಿದೆ. ಎಣಿಕೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಲ್ಲ ಕಡೆಯು ಪೊಲೀಸ್ ಸರ್ಪಗಾವಲು ಹಾಕಲಾಗಿದೆ.
ಚುನಾವಣೆಯಲ್ಲಿ ಗೆಲುವು ಖಚಿತವೆಂದು ಕಾಂಗ್ರಸ್ ಮತ್ತು ಬಿಜೆಪಿ ವಿಶ್ವಾಸ ವ್ಯಕ್ತಪಡಿಸಿವೆ. ಎರಡು ಪಕ್ಷಗಳ ನಡುವೆ ತೀವ್ರ ಪೈಪೋಟಿ ಇರಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳ ವರದಿ ತಿಳಿಸಿದೆ.
ಚುನಾವಣೆಯ ಫಲಿತಾಂಶವನ್ನು https://result.eci.gov.in ನಲ್ಲಿ ನೋಡಬಹುದು ಎಂದು ಚುನಾವಣಾ ಆಯೋಗ ತಿಳಿಸಿದೆ.
ಚುನಾವಣೋತ್ತರ ಸಮೀಕ್ಷೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.