ADVERTISEMENT

ಮಧ್ಯ ಪ್ರದೇಶ: ಅಮಾನತುಗೊಂಡ ಬಿಜೆಪಿ ನಾಯಕನ ಅಕ್ರಮ ಹೋಟೆಲ್ ಕಟ್ಟಡ ನೆಲಸಮ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಜನವರಿ 2023, 2:52 IST
Last Updated 4 ಜನವರಿ 2023, 2:52 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಸಾಗರ್: ಮಧ್ಯ ಪ್ರದೇಶದಲ್ಲಿ ಅಮಾನತುಗೊಂಡಿರುವ ಬಿಜೆಪಿ ನಾಯಕ ಮಿಶ್ರಿ ಚಂದ್ ಗುಪ್ತಾ ಅವರ ಅಕ್ರಮ ಹೋಟೆಲ್ ಕಟ್ಟಡವನ್ನು ಜಿಲ್ಲಾಡಳಿತವು ಮಂಗಳವಾರ ನೆಲಸಮಗೊಳಿಸಿದೆ.

ಈ ಸಂಬಂಧ ಸುದ್ದಿಸಂಸ್ಥೆ 'ಎಎನ್‌ಐ' ವಿಡಿಯೊ ಹಂಚಿದೆ.

ಜಗದೀಶ್ ಯಾದವ್ ಹತ್ಯೆ ಪ್ರಕರಣದಲ್ಲಿ ಮಿಶ್ರಿ ವಿರುದ್ಧ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ಭುಗಿಲೆದ್ದಿತ್ತು.

ADVERTISEMENT

ಡಿಸೆಂಬರ್ 22ರಂದು ಜಗದೀಶ್ ಯಾದವ್ ಅವರ ಮೇಲೆ ಎಸ್‌ಯುವಿ ಹರಿಸಿ ಹತ್ಯೆಗೈಯಲಾಗಿದೆ ಎಂದು ಮಿಶ್ರಿ ವಿರುದ್ಧ ಆರೋಪಿಸಲಾಗಿದೆ.

ಇಂದೋರ್‌ನ ವಿಶೇಷ ತಂಡ ಸ್ಫೋಟಕಗಳನ್ನು ಬಳಸಿ ಹೋಟೆಲ್ ಕಟ್ಟಡ ಧ್ವಂಸಗೊಳಿಸಿದೆ. ಕೆಲವೇ ಸೆಕೆಂಡುಗಳಲ್ಲಿ ಕಟ್ಟಡ ನೆಲಸಮವಾಯಿತು.

ಸಾಗರ್ ಜಿಲ್ಲಾಧಿಕಾರಿ ದೀಪಕ್ ಆರ್ಯ, ಡಿಐಜಿ ತರುಣ್ ನಾಯಕ ಸೇರಿದಂತೆ ಇತರೆ ಅಧಿಕಾರಿಗಳು ಕಾರ್ಯಾಚರಣೆಗೆ ನೇತೃತ್ವ ವಹಿಸಿದರು.

ಸುರಕ್ಷತೆಯ ದೃಷ್ಟಿಯಿಂದ ಹೋಟೆಲ್‌ನ ಸುತ್ತಲೂ ಬ್ಯಾರಿಕೇಡ್ ಆಳವಡಿಸಲಾಗಿತ್ತು. ಹೋಟೆಲ್ ಸುತ್ತುಮುತ್ತಲಿನ ಕಟ್ಟಡಗಳಲ್ಲಿ ವಾಸಿಸುವ ಜನರನ್ನು ಎಚ್ಚರಿಸಲಾಗಿತ್ತು. ಎಲ್ಲವೂ ಸಮರ್ಪಕವಾಗಿ ನಡೆದಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜಗದೀಶ್ ಯಾದವ್ ಹತ್ಯೆ ಪ್ರಕರಣದಲ್ಲಿ ಎಂಟು ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸದ್ಯ ಮಿಶ್ರಿಚಂದ್ ಗುಪ್ತಾ ತಲೆಮರೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.