ಭೋಪಾಲ್: ಬುಡಕಟ್ಟು ಸಮುದಾಯದ ಯುವಕನ ಮೇಲೆ ಮೂತ್ರ ವಿಸರ್ಜಿಸಿ ಜೈಲು ಪಾಲಾಗಿರುವ ವ್ಯಕ್ತಿಯ ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸಲು ಮಧ್ಯಪ್ರದೇಶ ಸರ್ಕಾರ ಬುಲ್ಡೋಜರ್ ಕ್ರಮ ಕೈಗೊಳ್ಳಲಿದೆ ಎಂದು ಗೃಹ ಸಚಿವ ನರೋತ್ತಮ್ ಮಿಶ್ರಾ ಬುಧವಾರ ತಿಳಿಸಿದ್ದಾರೆ.
ಪ್ರವೇಶ್ ಶುಕ್ಲಾ ಎಂಬಾತ ಬುಡಕಟ್ಟು ಯುವಕನ ಮೇಲೆ ಮೂತ್ರ ವಿಸರ್ಜಿಸುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು. ಇದು 'ಅಮಾನವೀಯ ಮತ್ತು ಖಂಡನಾರ್ಹ' ಎಂದು ಮಿಶ್ರಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆಡಳಿತ ಪಕ್ಷ ಬಿಜೆಪಿ ಹಾಗೂ ಸಿಧಿ ಕ್ಷೇತ್ರದ ಶಾಸಕರೊಂದಿಗೆ ಶುಕ್ಲಾ ನಂಟು ಹೊಂದಿದ್ದಾನೆ ಎನ್ನಲಾಗಿದ್ದು, ಆತನನ್ನು ಮಂಗಳವಾರ ಮಧ್ಯರಾತ್ರಿ ಬಂಧಿಸಲಾಗಿದೆ.
ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ನಿರ್ದೇಶನದಂತೆ, ಐಪಿಸಿಯ ವಿವಿಧ ಸೆಕ್ಷನ್‌ಗಳು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅಡಿಯಲ್ಲಿ ಸ್ಥಳೀಯ ಪೊಲೀಸರು 35 ವರ್ಷದ ಶುಕ್ಲಾ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.