ತಮಿಳುನಾಡು: ಕೊರೊನಾ ವೈರಸ್ ಒಬ್ಬರಿಂದ ಒಬ್ಬರಿಗೆ ಹರಡುವುದನ್ನುತಡೆಗಟ್ಟಲು ತಮಿಳುನಾಡಿನ ಮಾಸ್ಕ್ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದ್ದು, ಇದನ್ನು ಮನಗಂಡಿರುವ ಚೀನಾ ಹೆಚ್ಚಿನ ಪ್ರಮಾಣದಲ್ಲಿ ಮಾಸ್ಕ್‌ಗಳನ್ನುಭಾರತದಿಂದ ಆಮದು ಮಾಡಿಕೊಳ್ಳುತ್ತಿದೆ.
ಇದರಿಂದಾಗಿಮಧುರೈನ 'ಎಎಂ ಮೆಡಿವಿಯರ್'ಮಾಸ್ಕ್ ತಯಾರಿಕಾ ಘಟಕದಲ್ಲಿ ನೌಕರರು ಹಗಲು ರಾತ್ರಿ ಪಾಳಿಯಲ್ಲಿ ಕೆಲಸ ಮಾಡಿ ಮಾಸ್ಕ್ ತಯಾರಿಕಾ ಕೆಲಸದಲ್ಲಿ ನಿರತರಾಗಿದ್ದಾರೆ.
ಈ ಘಟಕದಲ್ಲಿ ಉತ್ಕೃಷ್ಟ ಗುಣಮಟ್ಟದ 'ಎನ್95' ಹೆಸರಿನ ಮಾಸ್ಕ್‌ಗಳನ್ನು ತಯಾರಿಸಲಾಗುತ್ತಿದೆ. ಇವುಗಳನ್ನು ಸ್ವಲ್ಪ ಪ್ರಮಾಣದಲ್ಲಿ ತಯಾರಿಸಿ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುತ್ತಿತ್ತು. ಆದರೆ, ಕಳೆದ 15 ದಿನಗಳಿಂದ ಚೀನಾಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಮಾಸ್ಕ್ ಗಳು ರಫ್ತಾಗುತ್ತಿವೆ.
'ನಮ್ಮಘಟಕದಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಾಸ್ಕ್ ತಯಾರಿಸಿಕೊಡುವಂತೆ ಭಾರತೀಯ ರಫ್ತುದಾರರಿಂದ ಬೇಡಿಕೆ ಬಂದಿದೆ. ಇವುಗಳನ್ನು ಚೀನಾಕ್ಕೆ ಕಳುಹಿಸುವುದಾಗಿ ರಫ್ತುದಾರರು ಹೇಳಿದ್ದಾರೆ' ಎಂದು ಘಟಕದ ವ್ಯವಸ್ಥಾಪಕ ನಿರ್ದೇಶಕ ಅಭಿಲಾಶ್ ತಿಳಿಸಿದ್ದು, ನಾವು ಮಾಮೂಲಿಗಿಂತ ಎರಡು ಪಟ್ಟು ಮಾಸ್ಕ್‌ಗಳನ್ನು ತಯಾರಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.