ಪಾಲ್ಘರ್: ಸಾಮೂಹಿಕ ವಿವಾಹದಲ್ಲಿ ಮದುವೆಯಾದ ದಂಪತಿಗೆ ಈ ಹಿಂದೆ ನೀಡುತ್ತಿದ್ದ ₹ 10 ಸಾವಿರ ಪ್ರೋತ್ಸಾಹಧನವನ್ನು ₹ 25 ಸಾವಿರಕ್ಕೆ ಹೆಚ್ಚಳ ಮಾಡುವುದಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಶನಿವಾರ ಹೇಳಿದ್ದಾರೆ.
ಪಾಲ್ಘರ್ ಜಿಲ್ಲೆಯಲ್ಲಿ ನಡೆದ 325 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಭಾರಿ ವೆಚ್ಚದ ವಿವಾಹಗಳನ್ನು ಜನರಿಗೆ ಭರಿಸಲಾಗದು. ಹಾಗಾಗಿ, ಸಾಮೂಹಿಕ ವಿವಾಹಗಳು ಇಂದಿನ ಅಗತ್ಯವಾಗಿದೆ’ ಎಂದರು.
‘ಸಾಮೂಹಿಕ ವಿವಾಹದಲ್ಲಿ ಮದುವೆಯಾದ ಅರ್ಹ ದಂಪತಿಗೆ ಈ ಹಿಂದೆ ₹ 10 ಸಾವಿರ ಪ್ರೋತ್ಸಾಹ ಧನ ನೀಡಲಾಗುತ್ತಿತ್ತು. ಇನ್ನು ಮುಂದೆ ಈ ಮೊತ್ತ ₹ 25 ಸಾವಿರಕ್ಕೆ ಹೆಚ್ಚಳ ಮಾಡಲಾಗುವುದು. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗುವುದು’ಎಂದು ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.