ಪುಣೆ (ಪಿಟಿಐ): ಮಹಾರಾಷ್ಟ್ರದ ಪುಣೆಯ ಹಿಂಜವಾಡಿಯಲ್ಲಿ ಭಾನುವಾರ ಏರ್ಪಡಿಸಿದ್ದ ಕರಾಟೆ ಸ್ಪರ್ಧೆ ಕಾರ್ಯಕ್ರಮದ ಉದ್ಘಾಟನೆ ಸಂದರ್ಭದಲ್ಲಿ ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆ ಅವರ ಸೀರೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಕೆಲ ಕಾಲ ಆತಂಕ ಸೃಷ್ಟಿಯಾಗಿತ್ತು. ಘಟನೆಯಲ್ಲಿ ಯಾವುದೇ ಹಾನಿಯಾಗಿಲ್ಲ ಎಂದು ಸುಳೆ ಹೇಳಿಕೆ ನೀಡಿದ್ದಾರೆ.
ಕಾರ್ಯಕ್ರಮದಲ್ಲಿ ಇಡಲಾಗಿದ್ದ ಛತ್ರಪತಿ ಶಿವಾಜಿ ಅವರ ಮೂರ್ತಿಗೆ ಹಾರ ಹಾಕುವ ಸಂದರ್ಭದಲ್ಲಿ ಅಲ್ಲೇ ಪಕ್ಕದಲ್ಲಿ ಇದ್ದ ದೀಪಕ್ಕೆ ಆಕಸ್ಮಿಕವಾಗಿ ಸುಳೆ ಅವರ ಸೀರೆ ತಗುಲಿರುವ ವಿಡಿಯೊ ಜಾಲತಾಣದಲ್ಲಿ ಹರಿದಾಡಿದೆ.
‘ಸೂಕ್ತ ಸಮಯದಲ್ಲಿ ಬೆಂಕಿ ನಂದಿಸಲಾಗಿದೆ. ಹಿತೈಷಿಗಳು, ನಗರವಾಸಿಗಳು, ಕಾರ್ಯಕರ್ತರು ಹಾಗೂ ನಾಯಕರು ಯಾವುದೇ ಆತಂಕ ಪಡುವ ಅವಶ್ಯಕತೆ ಇಲ್ಲ. ನನಗೆ ಯಾವುದೇ ತೊಂದರೆಯಾಗಿಲ್ಲ’ ಎಂದು ಸುಳೆ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.