ಮುಂಬೈ: ‘ಮಾರ್ಚ್ 17 ಶುಕ್ರವಾರದಿಂದ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ (ಎಂಎಸ್‌ಆರ್‌ಟಿಸಿ) ಎಲ್ಲಾ ರೀತಿಯ ಬಸ್‌ಗಳಲ್ಲಿ ಪ್ರಯಾಣಿಸುವ ಮಹಿಳಾ ಪ್ರಯಾಣಿಕರಿಗೆ ಟಿಕೆಟ್ ದರದಲ್ಲಿ ಶೇಕಡಾ 50ರಷ್ಟು ರಿಯಾಯಿತಿ ನೀಡಲಾಗುವುದು’ ಎಂದು ಸಾರಿಗೆ ಇಲಾಖೆ ತಿಳಿಸಿದೆ.
‘ಮಹಿಳಾ ಸಮ್ಮಾನ್ ಯೋಜನೆ’ಯಡಿ ಇದರ ಲಾಭವನ್ನು ವಿಸ್ತರಿಸಲಾಗುವುದು ಮತ್ತು ರಿಯಾಯಿತಿಯ ಮೊತ್ತವನ್ನು ರಾಜ್ಯ ಸರ್ಕಾರ ಮರುಪಾವತಿಸುತ್ತದೆ’ ಎಂದು ಎಂದು ಎಂಎಸ್‌ಆರ್‌ಟಿಸಿ ಶುಕ್ರವಾರ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದೆ.
ಮಾರ್ಚ್ 9ರಂದು 2023-24ರ ರಾಜ್ಯ ಬಜೆಟ್ ಅನ್ನು ಮಂಡಿಸಿದ ಉಪ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್, ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಪ್ರಯಾಣಿಸುವ ಎಲ್ಲ ಮಹಿಳೆಯರಿಗೆ ಶೇಕಡಾ 50ರಷ್ಟು ರಿಯಾಯಿತಿ ಘೋಷಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.