ನವದೆಹಲಿ: ಮಹಾದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದ ಹಣದ ಅಕ್ರಮ ವರ್ಗಾವಣೆ ಪ್ರಕರಣದ ವಿಚಾರಣೆ ಹಾಜರಾಗುವಂತೆ ಹಾಸ್ಯಗಾರ ಕಪಿಲ್ ಶರ್ಮ, ನಟಿಯರಾದ ಹುಮಾ ಖುರೇಷಿ ಮತ್ತು ಹೀನಾ ಖಾನ್ ಅವರಿಗೆ ಜಾರಿ ನಿರ್ದೇಶನಾಲಯವು (ಇ.ಡಿ) ಸಮನ್ಸ್ ನೀಡಿದೆ.
ಬಾಲಿವುಡ್ ನಟ ರಣಬೀರ್ ಕಪೂರ್ ಅವರಿಗೆ ಇ.ಡಿ. ಅಧಿಕಾರಿಗಳು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಬರುವಂತೆ ಈಗಾಗಲೇ ಸೂಚಿಸಿದ್ದಾರೆ. ಕಪೂರ್ ಅವರು ಎರಡು ವಾರಗಳ ಸಮಯ ಕೋರಿದ್ದಾರೆ ಎಂದು ಗೊತ್ತಾಗಿದೆ.
ಆ್ಯಪ್‌ನ ಪ್ರವರ್ತಕರು ಈ ಮೂವರು ಕಲಾವಿದರಿಗೆ ಹಣ ನೀಡಿದ್ದು ಹೇಗೆ ಎಂಬುದನ್ನು ಅರ್ಥ ಮಾಡಿಕೊಳ್ಳಲು ಇ.ಡಿ. ಅಧಿಕಾರಿಗಳು ಯತ್ನಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.