ADVERTISEMENT

ಆನ್‌ಲೈನ್‌ನಲ್ಲಿ ಮದ್ಯ: ಮಹಾರಾಷ್ಟ್ರ ಸರ್ಕಾರ ನಿರ್ಧಾರ

ಪಿಟಿಐ
Published 14 ಅಕ್ಟೋಬರ್ 2018, 15:25 IST
Last Updated 14 ಅಕ್ಟೋಬರ್ 2018, 15:25 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಆನ್‌ಲೈನ್‌ನಲ್ಲಿ ಮದ್ಯ ಮಾರಾಟ ಹಾಗೂ ಹೋಮ್‌ ಡೆಲಿವರಿಗೆ ಅವಕಾಶ ನೀಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ.

ಕುಡಿದು ವಾಹನ ಓಡಿಸುವ ಪ್ರಸಂಗಗಳನ್ನು ತಡೆಗಟ್ಟುವಲ್ಲಿ ಇದು ಮಹತ್ವದ ಹೆಜ್ಜೆ ಎಂದು ಸರ್ಕಾರ ಅಭಿಪ್ರಾಯಪಟ್ಟಿದೆ. ಈ ನಿರ್ಧಾರ ಎಂದಿನಿಂದ ಜಾರಿಗೆ ಬರಲಿದೆ ಎಂಬುದನ್ನು ಅಬಕಾರಿ ಸಚಿವ ಚಂದ್ರಶೇಖರ ಬವಾಂಕುಲೆ ಅವರು ಖಚಿತವಾಗಿ ತಿಳಿಸಿಲ್ಲ.

ಆದಾಯವನ್ನು ಹೆಚ್ಚಿಸಿಕೊಳ್ಳುವುದೂ ಈ ನಿರ್ಧಾರದ ಹಿಂದಿರುವ ಮತ್ತೊಂದು ಕಾರಣ ಎಂದು ಸರ್ಕಾರದ ಅಧಿಕಾರಿಯೊಬ್ಬರು ಹೇಳಿದ್ದಾರೆ. ಪ್ರಮುಖ ಇ–ಕಾಮರ್ಸ್ ಕಂಪನಿಗಳು ಆನ್‌ಲೈನ್‌ನಲ್ಲಿ ಮದ್ಯ ಮಾರಾಟಕ್ಕೆ ಉತ್ಸುಕವಾಗಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.