ನವದೆಹಲಿ: ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸುವ ಸಲುವಾಗಿಶಿವಸೇನಾ ಜೊತೆ ಮೈತ್ರಿ ಮಾಡಿಕೊಂಡರೆ, ಉತ್ತರ ಪ್ರದೇಶದ ಫಲಿತಾಂಶವೇ ಮರುಕಳಿಸುತ್ತದೆ ಎಂದುಕಾಂಗ್ರೆಸ್ ನಾಯಕ ಸಂಜಯ್ ನಿರುಪಮ್ ತಮ್ಮ ಪಕ್ಷಕ್ಕೆ ಎಚ್ಚರಿಸಿದ್ದಾರೆ.
ಮುಂಬೈ ಕಾಂಗ್ರೆಸ್ ಘಟಕದ ಮಾಜಿ ಅಧ್ಯಕ್ಷರಾಗಿರುವ ಸಂಜಯ್, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಯಾವುದೇ ಒತ್ತಡಗಳಿಗೆ ಒಳಗಾಗಬಾರದು ಎಂದು ಟ್ವಿಟರ್‌ನಲ್ಲಿ ಮನವಿ ಮಾಡಿದ್ದಾರೆ.
‘ಉತ್ತರ ಪ್ರದೇಶದಲ್ಲಿವರ್ಷದ ಹಿಂದೆಬಿಎಸ್‌ಪಿ(ಬಹುಜನ ಸಮಾಜವಾದಿ ಪಕ್ಷ) ಜೊತೆ ಕೈಜೋಡಿಸಿ ತಪ್ಪು ಮಾಡಿದ್ದೆವು. ಕಾಂಗ್ರೆಸ್‌ಗೆ ಆ ವೈಫಲ್ಯದಿಂದ ಚೇತರಿಸಿಕೊಳ್ಳಲು ಇನ್ನೂ ಸಾಧ್ಯವಾಗಿಲ್ಲ.ಅದೇ ತಪ್ಪನ್ನು ಮಹಾರಾಷ್ಟ್ರದಲ್ಲೂ ಮಾಡುತ್ತಿದ್ದೇವೆ’ ಎಂದು ಹಿಂದಿಯಲ್ಲಿ ಬರೆದುಕೊಂಡಿದ್ದಾರೆ.
ಶಿವಸೇನಾದ ಮುಖವಾಣಿ ಸಾಮ್ನಾದ ಮಾಜಿ ಸಂಪಾದಕರಾಗಿರುವ ಸಂಜಯ್ ಅದೇ ಪಕ್ಷದಿಂದ ರಾಜಕೀಯ ಆರಂಭಿಸಿದ್ದರು. ರಾಜ್ಯಸಭೆಗೂ ಆಯ್ಕೆಯಾಗಿದ್ದ ಅವರನ್ನು ರಾಜ್ಯಸಭೆಯಲ್ಲಿ ಪಕ್ಷದ ಉಪನಾಯಕರನ್ನಾಗಿ ಆಯ್ಕೆ ಮಾಡಲಾಗಿತ್ತು.
2015ರಲ್ಲಿ ಸೇನಾದಿಂದ ಹೊರಬಂದಿದ್ದ ಅವರು ಕಾಂಗ್ರೆಸ್ ಸೇರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.