ADVERTISEMENT

'ಮಹಾ' ಚುನಾವಣೆಗೆ MVA ಮೈತ್ರಿಕೂಟದ ಪ್ರಣಾಳಿಕೆ: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2024, 9:36 IST
Last Updated 10 ನವೆಂಬರ್ 2024, 9:36 IST
<div class="paragraphs"><p>ಮಹಾ ವಿಕಾಸ್ ಅಘಾಡಿ&nbsp;ಮೈತ್ರಿಕೂಟದ ಪ್ರಣಾಳಿಕೆ ಬಿಡುಗಡೆ ಮಾಡಿದ&nbsp;ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ</p></div>

ಮಹಾ ವಿಕಾಸ್ ಅಘಾಡಿ ಮೈತ್ರಿಕೂಟದ ಪ್ರಣಾಳಿಕೆ ಬಿಡುಗಡೆ ಮಾಡಿದ ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

   

(ಪಿಟಿಐ ಚಿತ್ರ)

ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟ ತನ್ನ ಪ್ರಣಾಳಿಕೆಯನ್ನು ಭಾನುವಾರ ಬಿಡುಗಡೆ ಮಾಡಿದೆ.

ADVERTISEMENT

ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಈ ವೇಳೆ ಸುಪ್ರಿಯಾ ಸುಳೆ, ಸಂಜಯ್ ರಾವುತ್ ಸೇರಿದಂತೆ ಎಂವಿಎನ ಹಿರಿಯ ನಾಯಕರು ಉಪಸ್ಥಿತರಿದ್ದರು.

48 ಪುಟಗಳ ಪ್ರಣಾಳಿಕೆಯಲ್ಲಿ ಎಂವಿಎ ಹಲವು ಭರವಸೆಗಳನ್ನು ನೀಡಿದೆ. ಪ್ರಣಾಳಿಕೆಯ ಮುಖ್ಯಾಂಶಗಳು ಇಲ್ಲಿವೆ..

  • ಮಹಾಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ತಿಂಗಳಿಗೆ ₹3,000 ಆರ್ಥಿಕ ನೆರವು.

  • ರಾಜ್ಯದಾದ್ಯಂತ ಜಾತಿ ಗಣತಿ ನಡೆಸಲಾಗುವುದು.

  • ಕರ್ನಾಟಕದಂತೆಯೇ, ರಾಜ್ಯದಾದ್ಯಂತ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ.

  • ನಿರುದ್ಯೋಗಿ ಯುವಕರಿಗೆ ಮಾಸಿಕ ₹ 4,000 ನಿರುದ್ಯೋಗ ಭತ್ಯೆ.

  • ಸಕಾಲದಲ್ಲಿ ಸಾಲ ಪಾವತಿಸಿದ ರೈತರಿಗೆ ತಲಾ ₹50 ಸಾವಿರ ಪ್ರೋತ್ಸಾಹ ಧನ.

  • ರಾಜಸ್ಥಾನದಲ್ಲಿ ಅಶೋಕ್ ಗೆಹಲೋತ್‌ ಸರ್ಕಾರ ಪ್ರಾರಂಭಿಸಿದಂತೆಯೇ ರಾಜ್ಯದ (ಮಹಾರಾಷ್ಟ್ರ) ನಾಗರಿಕರಿಗೆ ₹25 ಲಕ್ಷದ ವರೆಗೆ ಆರೋಗ್ಯ ವಿಮಾ ಯೋಜನೆ.

ಬಿಜೆಪಿ ಕೂಡ ಇಂದು ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ರೈತರ ಸಾಲಮನ್ನಾ ಸೇರಿದಂತೆ ಪ್ರಮುಖವಾಗಿ 25 ಭರವಸೆಗಳನ್ನು ನೀಡಿದೆ.

ರಾಜ್ಯದಲ್ಲಿ ನವೆಂಬರ್‌ 20ರಂದು ಒಂದೇ ಹಂತದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ನವೆಂಬರ್‌ 23ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.