ADVERTISEMENT

ಮಹಾರಾಷ್ಟ್ರ ಚುನಾವಣೆ | ಶಿವಸೇನಾ UBTಯ 65 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 23 ಅಕ್ಟೋಬರ್ 2024, 14:14 IST
Last Updated 23 ಅಕ್ಟೋಬರ್ 2024, 14:14 IST
<div class="paragraphs"><p>ಸಂಜಯ ರಾವುತ್ ಹಾಗೂ ಉದ್ಧವ್ ಠಾಕ್ರೆ</p></div>

ಸಂಜಯ ರಾವುತ್ ಹಾಗೂ ಉದ್ಧವ್ ಠಾಕ್ರೆ

   

ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಕಾವು ಬಿರುಸುಗೊಂಡಿದ್ದು, ಉದ್ಧವ್ ಠಾಕ್ರೆ ಬಣದ ಶಿವಸೇನಾ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ.

ಒಟ್ಟು 65 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಇದರಲ್ಲಿ ಮುಂಬೈನ ವರ್ಲಿಯಿಂದ ಆದಿತ್ಯ ಠಾಕ್ರೆ ಸ್ಪರ್ಧಿಸಲಿದ್ದಾರೆ.

ADVERTISEMENT

ಅಭ್ಯರ್ಥಿಗಳ ಪಟ್ಟಿಯನ್ನು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪಕ್ಷ ಪ್ರಕಟಿಸಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಎನ್‌ಸಿಪಿ (ಎಸ್‌ಪಿ) ಜತೆಗೂಡಿ ಸ್ಪರ್ಧಿಸಿ ಗರಿಷ್ಠ ಕ್ಷೇತ್ರಗಳನ್ನು ಗೆದ್ದಿರುವ ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟದ ಮಹಾ ವಿಕಾಸ ಅಘಾಡಿಯು, ಈ ಬಾರಿಯೂ ಮೈತ್ರಿ ಮಾತುಕತೆ ನಡೆಸಿವೆ. ವಿಧಾನಸಭೆಯ ಒಟ್ಟು 288 ಕ್ಷೇತ್ರಗಳಲ್ಲಿ ಮಹಾವಿಕಾಸ ಅಘಾಡಿಯ ಈ ಮಿತ್ರ ಪಕ್ಷಗಳು ಈವರೆಗೂ 200 ಕ್ಷೇತ್ರಗಳ ಸೀಟು ಹಂಚಿಕೆಯನ್ನು ಅಂತಿಮಗೊಳಿಸಿವೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.