ADVERTISEMENT

ಕರ್ತವ್ಯ ನಿರತ ಪೊಲೀಸ್ ಕಾನ್‌ಸ್ಟೆಬಲ್‌ ಮೇಲೆ ಹಲ್ಲೆ: BJP ಶಾಸಕನ ವಿರುದ್ಧ ದೂರು

ಪಿಟಿಐ
Published 6 ಜನವರಿ 2024, 10:59 IST
Last Updated 6 ಜನವರಿ 2024, 10:59 IST
<div class="paragraphs"><p>ಸಾಮಾಜಿಕ ಜಾಲತಾಣ ಎಕ್ಸ್‌</p></div>
   

ಸಾಮಾಜಿಕ ಜಾಲತಾಣ ಎಕ್ಸ್‌

ಪುಣೆ: ಮಹಾರಾಷ್ಟ್ರದ ಪುಣೆ ನಗರದಲ್ಲಿ, ಕರ್ತವ್ಯ ನಿರತ ಪೊಲೀಸ್ ಕಾನ್‌ಸ್ಟೆಬಲ್‌ಗೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಾಸಕ ಕಪಾಳಮೋಕ್ಷ ಮಾಡಿದ ಪ್ರಕರಣ ನಡೆದಿದ್ದು, ಶಾಸಕನ ವಿರುದ್ಧ ಶನಿವಾರ ಪ್ರಕರಣ ದಾಖಲಾಗಿದೆ.

ಪುಣೆ ಕಂಟೋನ್ಮೆಂಟ್ ಕ್ಷೇತ್ರದ ಶಾಸಕ ಸುನಿಲ್ ಕಾಂಬ್ಳೆ ಅವರು, ಇಲ್ಲಿನ ಸಸೂನ್ ಜನರಲ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾನ್‌ಸ್ಟೆಬಲ್‌ ಅವರಿಗೆ ಕಪಾಳಮೋಕ್ಷ ಮಾಡಿದ್ದಾರೆ ಎಂದೆನ್ನಲಾಗಿದೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ADVERTISEMENT

ಸಸೂನ್ ಜನರಲ್ ಆಸ್ಪತ್ರೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಕೂಡ ಉಪಸ್ಥಿತರಿದ್ದರು . ಕಾರ್ಯಕ್ರಮದ ನಂತರ ವೇದಿಕೆಯಿಂದ ಕೆಳಗೆ ಬರುತ್ತಿರುವಾಗ ಅಡ್ಡ ಬಂದ ಕಾನ್‌ಸ್ಟೆಬಲ್‌ಗೆ ಕಾಂಬ್ಳೆ ಕಪಾಳಮೋಕ್ಷ ಮಾಡಿರುವ ದೃಶ್ಯಗಳು ವಿಡಿಯೊದಲ್ಲಿದೆ.

ಕಾನ್‌ಸ್ಟೆಬಲ್‌ ನೀಡಿದ ದೂರಿನ ಆಧಾರದ ಮೇಲೆ ಕಾಂಬ್ಳೆ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆ ಸಂಬಂಧ ಪ್ರತಿಕ್ರಿಯಿಸಿರುವ ಕಾಂಬ್ಳೆ, ಆರೋಪವನ್ನು ತಳ್ಳಿಹಾಕಿದ್ದಾರೆ. ‘ನಾನು ಯಾರ ಮೇಲೂ ಹಲ್ಲೆ ಮಾಡಿಲ್ಲ, ನಾನು ಮೆಟ್ಟಿಲುಗಳಿಂದ ಇಳಿಯುತ್ತಿದ್ದಾಗ ಯಾರೋ ಅಡ್ಡ ಬಂದರು, ನಾನು ಅವರನ್ನು ತಳ್ಳಿ ಮುಂದೆ ಹೋದೆ’ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.