ADVERTISEMENT

ಐಎಎಸ್‌ ಅಧಿಕಾರಿ ಸಂಜೀವ್‌ ಕುಮಾರ್‌ ಎಎಐ ಅಧ್ಯಕ್ಷ

ಪಿಟಿಐ
Published 7 ಏಪ್ರಿಲ್ 2021, 16:31 IST
Last Updated 7 ಏಪ್ರಿಲ್ 2021, 16:31 IST
ಕೊಚ್ಚಿನ್‌ ವಿಮಾನ ನಿಲ್ದಾಣ–ಸಾಂದರ್ಭಿಕ ಚಿತ್ರ
ಕೊಚ್ಚಿನ್‌ ವಿಮಾನ ನಿಲ್ದಾಣ–ಸಾಂದರ್ಭಿಕ ಚಿತ್ರ   

ನವದೆಹಲಿ: ಮಹಾರಾಷ್ಟ್ರ ಕೇಡರ್‌ನ ಐಎಎಸ್‌ ಅಧಿಕಾರಿ ಸಂಜೀವ್‌ ಕುಮಾರ್‌, ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಅಧ್ಯಕ್ಷರಾಗಿ ಬುಧವಾರ ಅಧಿಕಾರ ವಹಿಸಿಕೊಂಡಿದ್ದಾರೆ.

1993ರ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿರುವ ಸಂಜೀವ್‌, ಮಹಾರಾಷ್ಟ್ರ ಸರ್ಕಾರದ ರಾಜ್ಯ ಆಯುಕ್ತರಾಗಿ (ಜಿಎಸ್‌ಟಿ) ಕಾರ್ಯನಿರ್ವಹಿಸುತ್ತಿದ್ದರು ಎಂದು ಎಎಐ ಪ್ರಕಟಣೆಯಲ್ಲಿ ತಿಳಿಸಿದೆ.

ತಮ್ಮ ಸೇವಾವಧಿಯಲ್ಲಿ ಮಹಾರಾಷ್ಟ್ರ ಸರ್ಕಾರದ ಜಲಮಂಡಳಿ ಮತ್ತು ಒಳಚರಂಡಿ, ಇಂಧನ ಹಾಗೂ ಕೈಗಾರಿಕೆ ಸೇರಿದಂತೆ ಹಲವು ಸಚಿವಾಲಯಗಳು, ಇಲಾಖೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ.

ADVERTISEMENT

ಅನುಜ್‌ ಅಗರ್ವಾಲ್‌ ಎಎಐನ ಹಂಗಾಮಿ ಅಧ್ಯಕ್ಷರಾಗಿ ಮೂರು ತಿಂಗಳಿಂದ ಕಾರ್ಯನಿರ್ವಹಿಸಿದ್ದರು. ಅದಕ್ಕೂ ಮುನ್ನ 2019ರ ನವೆಂಬರ್‌ 6ರಿಂದ 2021ರ ಜನವರಿ 24ರ ವರೆಗೂ ಅರವಿಂದ್‌ ಸಿಂಗ್‌ ಎಎಐ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಅರವಿಂದ್‌ ಸಿಂಗ್‌ ಪ್ರವಾಸೋದ್ಯಮ ಸಚಿವಾಲಯದ ಕಾರ್ಯದರ್ಶಿಯಾಗಿದ್ದಾರೆ.

ಸಂಜೀವ್‌ ಕುಮಾರ್‌ ರೂರ್ಕಿ ಯೂನಿವರ್ಸಿಟಿಯಲ್ಲಿ (ಈಗ ಐಐಟಿ ರೂರ್ಕಿ) ಎಲೆಕ್ಟ್ರಾನಿಕ್ಸ್‌ ಮತ್ತು ಕಮ್ಯುನಿಕೇಷನ್ಸ್‌ ಎಂಜಿನಿಯಿಂಗ್‌ ಪದವಿ ಪಡೆದಿದ್ದಾರೆ. ಐಐಟಿ ಕಾನ್ಪುರದಲ್ಲಿ ಕಮ್ಯುನಿಕೇಷನ್‌ ಎಂಜಿನಿಯರಿಂಗ್‌ನಲ್ಲಿ ಎಂ.ಟೆಕ್ ಪೂರೈಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.