ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಬುಧವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ಕಮಲ್ ನಾಥ್ ತಿಳಿಸಿದ್ದಾರೆ.
ಶಿವಸೇನಾ ನಾಯಕ ಏಕನಾಥ್ ಶಿಂಧೆ ನೇತೃತ್ವದ ಶಾಸಕರ ಗುಂಪು ಬಂಡಾಯ ಸಾರಿದ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
ಇತ್ತ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರಿಗೂ ಕೋವಿಡ್ ದೃಢಪಟ್ಟಿದ್ದು, ಬುಧವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ.
‘ಮಹಾ ವಿಕಾಸ್ ಅಘಾಡಿ’ ಮೈತ್ರಿ ಸರ್ಕಾರದ ವಿರುದ್ಧ ಬಂಡಾಯವೆದ್ದಿರುವ ಶಿವಸೇನಾ ಶಾಸಕರು ಏಕನಾಥ್ ಶಿಂಧೆ ನೇತೃತ್ವದಲ್ಲಿ ಅಸ್ಸಾಂನ ಗುವಾಹಟಿಯಲ್ಲಿ ತಂಗಿದ್ದಾರೆ.
ಈ ಮಧ್ಯೆ, ಮಹಾರಾಷ್ಟ್ರದ ರಾಜಕೀಯ ಬೆಳವಣಿಗೆಗಳು ವಿಧಾನಸಭೆ ವಿಸರ್ಜನೆಯತ್ತ ಸಾಗುತ್ತಿವೆ ಎಂದು ಶಿವಸೇನಾ ನಾಯಕ ಸಂಜಯ್ ರಾವುತ್ ಟ್ವೀಟ್ ಮಾಡಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.
288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಶಿವ ಸೇನಾ 55 ಶಾಸಕರು ಸೇರಿದಂತೆ ಮಿತ್ರಪಕ್ಷಗಳಾದ ಎನ್‌ಸಿಪಿ (53) ಮತ್ತು ಕಾಂಗ್ರೆಸ್ (44) ಶಾಸಕರನ್ನು ಒಳಗೊಂಡಿರುವ ಸರ್ಕಾರ ಅಸ್ಥಿತ್ವದಲ್ಲಿದೆ.
ಓದಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.